ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ 3ನೇ ಕೊರೊನಾ ಅಲೆ ಆತಂಕ ಬೇಡ, ಜಾಗ್ರತೆ ವಹಿಸುತ್ತೇವೆ: ಕೇಜ್ರಿವಾಲ್‌

Last Updated 4 ನವೆಂಬರ್ 2020, 10:09 IST
ಅಕ್ಷರ ಗಾತ್ರ

ನವದೆಹಲಿ‌: ದೆಹಲಿಯಲ್ಲಿ ಕೆಲ ದಿನಗಳಿಂದ ಹೊಸ ಕೋವಿಡ್‌–19 ಪ್ರಕರಣಗಳ ಸಂಖ್ಯೆಯು ಹೆಚ್ಚು ದಾಖಲಾಗುತ್ತಿದ್ದು, ಸೋಂಕಿನ ಮೂರನೇ ಹಂತದ ಅಲೆ ಆರಂಭವಾಗಿದೆ ಎನ್ನಬಹುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಆದರೆ, ಜನರು ಈ ಕುರಿತು ಯಾವುದೇ ರೀತಿಯಲ್ಲಿ ಭೀತಿಗೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ಪರಿಸ್ಥಿತಿಯನ್ನು ನಿಯಮಿತವಾಗಿ ಗಮನಿಸಿ ಕ್ರಮವಹಿಸುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ನಾವು ನಿಯಮಿತವಾಗಿ ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ. ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ. ಆತಂಕ ಬೇಡ ಎಂದು ಅವರು ಹೇಳಿದ್ದಾರೆ.

ಕೋವಿಡ್‌ನಿಂದಾಗಿ ಸಾವುಗಳನ್ನು ಆದಷ್ಟು ತಪ್ಪಿಸುವುದು ಹಾಗೂ ಕೋವಿಡ್ ಪೀಡಿತರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ, ಚಿಕಿತ್ಸೆ ನೀಡುವುದೇ ಸರ್ಕಾರದ ಆದ್ಯತೆ. ಪೂರಕವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆಗಳ ಸಂಖ್ಯೆಯನ್ನು ಸರ್ಕಾರ ಹೆಚ್ಚಿಸಿದೆ. ದುರದೃಷ್ಟವಶಾತ್ ಹೈಕೋರ್ಟ್ ಅದಕ್ಕೆ ತಡೆ ನೀಡಿದೆ. ತಡೆಯಾಜ್ಞೆಯನ್ನು ತೆರವುಗೊಳಿಸಲು ಕೋರಿ ನಾವು ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ ಎಂದೂ ಮುಖ್ಯಮಂತ್ರಿ ಹೇಳಿದರು.

ದೆಹಲಿಯಲ್ಲಿ ಮಂಗಳವಾರ 59,540 ಪರೀಕ್ಷೆಯನ್ನು ನಡೆಸಿದ್ದು, ಒಟ್ಟು 6,725 ಪ್ರಕರಣಗಳು ವರದಿಯಾಗಿದ್ದವು. ಮತ್ತೆ 48 ಜನರು ಸತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT