ಬುಧವಾರ, ಏಪ್ರಿಲ್ 14, 2021
25 °C

ರಿಂಕು ಶರ್ಮಾ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯ ಮಂಗಲಪುರಿ ಪ್ರದೇಶದಲ್ಲಿ ನಡೆದ ರಿಂಕು ಶರ್ಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ಹೇಳಿದ್ದಾರೆ.

ದೀನ್‌ ಮೊಹ್ದ್‌, ದಿಲ್ಷನ್‌, ಫಯಾಜ್‌ ಹಾಗೂ ಫೈಜನ್‌ ಬಂಧಿತರು. ಬಂಧಿತರೆಲ್ಲರೂ ಮಂಗಲಪುರಿ ನಿವಾಸಿಗಳಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ 9 ಜನ ಆರೋಪಿಗಳನ್ನು ಬಂಧಿಸಿದಂತಾಗಿದೆ.

‘ಆರೋಪಿಗಳು ರಿಂಕು ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ದೃಶ್ಯಗಳು ಸಿ.ಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇದರ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ದೆಹಲಿ ಪೊಲೀಸ್‌ ಇಲಾಖೆಯ ಹೆಚ್ಚುವರಿ ಪಿಆರ್‌ಒ ಅನಿಲ್‌ ಮಿತ್ತಲ್‌ ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು