ಗುರುವಾರ , ಸೆಪ್ಟೆಂಬರ್ 16, 2021
29 °C

ದೆಹಲಿ ಶಾಸಕರಿಗೆ ಇನ್ನು ₹ 90 ಸಾವಿರ ವೇತನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯ ಶಾಸಕರ ಮಾಸಿಕ ವೇತನವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಾಡಿದ್ದ ಶಿಫಾರಸನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ.

ಇನ್ನು ಮುಂದೆ ದೆಹಲಿಯ ಪ್ರತಿ ಶಾಸಕರು ವೇತನ ಮತ್ತು ಭತ್ಯೆ ಸೇರಿ ತಿಂಗಳಿಗೆ ₹90 ಸಾವಿರ ಪಡೆಯುತ್ತಾರೆ. ಇದಕ್ಕೂ ಮುನ್ನ ಶಾಸಕರು ಪ್ರತಿ ತಿಂಗಳು ₹53 ಸಾವಿರ ವೇತನ ಪಡೆಯುತ್ತಿದ್ದರು. ಇದರಲ್ಲಿ ₹12 ಸಾವಿರ ವೇತನವಾದರೆ, ಉಳಿದ ಹಣವನ್ನು ಇತರೆ ಭತ್ಯೆಗಳ  ರೂಪದಲ್ಲಿ ನೀಡಲಾಗುತ್ತಿತ್ತು ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಪರಿಷ್ಕೃತ ವೇತನದಿಂದಾಗಿ ಪ್ರತಿ ಶಾಸಕರು ತಿಂಗಳಿಗೆ ₹30 ಸಾವಿರವನ್ನು ವೇತನವಾಗಿ ಹಾಗೂ ₹60 ಸಾವಿರ ಹಣವನ್ನು ವಿವಿಧ ಭತ್ಯೆಗಳ ರೂಪದಲ್ಲಿ ಪಡೆಯಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

‘ವೇತನದಲ್ಲಿ ಇಷ್ಟೆಲ್ಲ ಏರಿಕೆಯಾದರೂ, ಇಡೀ ದೇಶದಲ್ಲೇ ಅತಿ ಕಡಿಮೆ ವೇತನ ಪಡೆಯುವವರು ದೆಹಲಿ ಶಾಸಕರು‘ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಹತ್ತು ವರ್ಷಗಳಿಂದ ದೆಹಲಿ ಶಾಸಕರ ವೇತನವನ್ನು ಹೆಚ್ಚಿಸಿರಲಿಲ್ಲ. ಇತ್ತೀಚೆಗೆ ಕೇಜ್ರಿವಾಲ್‌ ಸರ್ಕಾರ ಶಾಸಕರ ವೇತನವನ್ನು ಹೆಚ್ಚಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಿತ್ತು. ಇತರೆ ರಾಜ್ಯಗಳಲ್ಲಿ ಶಾಸಕರಿಗೆ ನೀಡುವ ವೇತನ ಮತ್ತು ಭತ್ಯೆಗಳಿಗೆ ಸರಿ ಸಮಾನವಿರುವಷ್ಟು ವೇತನ ನೀಡಬೇಕೆಂದು ಮನವಿ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು