ಶನಿವಾರ, ಸೆಪ್ಟೆಂಬರ್ 25, 2021
30 °C

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷಾ ದರ ತಗ್ಗಿಸಿದ ದೆಹಲಿ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಸರ್ಕಾರವು ಕೋವಿಡ್ ಆರ್‌ಟಿ-ಪಿಸಿಆರ್ ಪರೀಕ್ಷಾ ದರವನ್ನು ಖಾಸಗಿ ಲ್ಯಾಬ್‌ಗಳು ಮತ್ತು ಆಸ್ಪತ್ರೆಗಳಲ್ಲಿ ₹ 500 ಆ್ಯಂಟಿಜನ್ ಪರೀಕ್ಷೆಗೆ ₹ 300 ನಿಗದಿ ಮಾಡಿದೆ.

‘ದೆಹಲಿ ಸರ್ಕಾರವು ಕೊರೊನಾ ಪರೀಕ್ಷಾ ದರವನ್ನು ಅತ್ಯಂತ ಕಡಿಮೆ ಮಾಡಿದೆ. ಇದು ಸಾಮಾನ್ಯ ಜನರಿಗೆ ಸಹಾಯವಾಗುತ್ತದೆ.’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಹೊಸ ಆದೇಶದ ಪ್ರಕಾರ, ಮನೆಗೆ ಬಂದು ಮಾದರಿಗಳ ಸಂಗ್ರಹಣೆ ಮತ್ತು ಪರೀಕ್ಷೆಗೆ ₹ 700 ನಿಗದಿ ಮಾಡಲಾಗಿದ್ದು, ಈ ಹಿಂದೆ ಇದರ ಬೆಲೆ ₹ 1,200 ಆಗಿತ್ತು.

ಸರ್ಕಾರಿ ಕೇಂದ್ರಗಳು ಮತ್ತು ಆಸ್ಪತ್ರೆಗಳಲ್ಲಿ ಆರ್‌ಟಿ– ಪಿಸಿಆರ್ ಮತ್ತು ರ್‍ಯಾಪಿಡ್ ಆ್ಯಂಟಿಜನ್ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಗುತ್ತದೆ. ಕಳೆದ ವರ್ಷ ನವೆಂಬರ್‌ನಲ್ಲಿ ಸರ್ಕಾರವು ಖಾಸಗಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳ ದರವನ್ನು ₹ 800 ನಿಗದಿಪಡಿಸಿತ್ತು.

24 ಗಂಟೆಗಳಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳಿಗೆ ಪರಿಷ್ಕೃತ ದರಗಳನ್ನು ಪ್ರಮುಖ ಸ್ಥಳದಲ್ಲಿ ಪ್ರದರ್ಶಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಅಲ್ಲದೆ, 24 ಗಂಟೆಗಳಲ್ಲಿ ಮಾದರಿಗಳ ಪರೀಕ್ಷೆ ನಡೆಸಿ ವರದಿಯನ್ನು ಗ್ರಾಹಕರು ಮತ್ತು ಐಸಿಎಂಆರ್ ಪೋರ್ಟಲ್‌ನಲ್ಲಿ ಹಂಚಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು