ಶುಕ್ರವಾರ, ಸೆಪ್ಟೆಂಬರ್ 17, 2021
26 °C

ಎಲೆಕ್ಟ್ರಿಕ್‌ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದ ದೆಹಲಿ ಸರ್ಕಾರ 

ಪಿಟಿಐ Updated:

ಅಕ್ಷರ ಗಾತ್ರ : | |

ವದೆಹಲಿ: ಬ್ಯಾಟರಿ ಚಾಲಿತ ಎಲೆಕ್ಟ್ರಿಕ್‌ ವಾಹನಗಳಿಗೆ ದೆಹಲಿ ಸರ್ಕಾರವು ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದೆ.

ಸರ್ಕಾರದ ವಾಹನ ನೀತಿ ಅಡಿಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸಾರಿಗೆ ಸಚಿವ ಕೈಲಾಶ್‌ ಗೆಹ್ಲೋಟ್‌ ಭಾನುವಾರ ತಿಳಿಸಿದ್ದಾರೆ.

ಈ ಬಗ್ಗೆ ದೆಹಲಿ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ರಾಷ್ಟ್ರರಾಜಧಾನಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಕ್ಷಣದಿಂದ ಜಾರಿಗೆ ಬರುವಂತೆ ಬ್ಯಾಟರಿ ಚಾಲಿತ ಎಲ್ಲ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಗೆಹ್ಲೋಟ್ ‘ದೆಹಲಿಗೆ ಅಭಿನಂದನೆಗಳು. ಐತಿಹಾಸಿ ಎಲೆಕ್ಟ್ರಿಕ್‌ ವಾಹನ ನೀತಿ ಘೋಷಣೆ ಮಾಡುವಾಗ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ. ದೆಹಲಿ ಸರ್ಕಾರವು ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದೆ. ದೆಹಲಿಯ ಜನ ಶೀಘ್ರವೇ ಇತರ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಪರಿವರ್ತನೆಗೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು