ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ, ನಿರ್ಮಾಣ ಚಟುವಟಿಕೆಗೆ ಅವಕಾಶ

Last Updated 22 ನವೆಂಬರ್ 2021, 9:03 IST
ಅಕ್ಷರ ಗಾತ್ರ

ನವದೆಹಲಿ: ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದ ಕಾರಣ, ದೆಹಲಿ ಸರ್ಕಾರವು ನಿರ್ಮಾಣ ಚಟುವಟಿಕೆ ಮತ್ತು ಹಳೆಯ ಕಟ್ಟಡಗಳನ್ನು ನೆಲಸಮಗೊಳಿಸುವ ಮೇಲೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ ಎಂದು ಪರಿಸರ ಸಚಿವ ಗೋಪಾಲ್‌ ರಾಯ್ ಸೋಮವಾರ ತಿಳಿಸಿದ್ದಾರೆ.

ಶಾಲೆ ಪುನರಾರಂಭಗೊಳಿಸುವ ಬಗ್ಗೆ ಮತ್ತು ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರ ಇದೇ 24ರಂದು ನಿರ್ಧಾರ ಕೈಗೊಳ್ಳಲಿದೆ ಎಂದು ರಾಯ್‌ ತಿಳಿಸಿದ್ದಾರೆ.

ಸಿಎನ್‌ಜಿ ಮೂಲಕ ಸಂಚರಿಸುವ ಟ್ರಕ್‌ಗಳಿಗೆ ದೆಹಲಿಯೊಳಗೆ ಅವಕಾಶ ನೀಡುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ನವೆಂಬರ್‌ 26ರವರೆಗೆ ಇವುಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT