ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಮತ್ತೆ ಹೆಚ್ಚಿದ ಕೊರೊನಾ ಆತಂಕ

ಒಂದೇ ವಾರದಲ್ಲಿ ಪಾಸಿಟಿವಿಟಿ ದರ ಶೇ 2.39ಕ್ಕೆ ಜಿಗಿತ
Last Updated 15 ಏಪ್ರಿಲ್ 2022, 15:13 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ):ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇ 2ಕ್ಕಿಂತ ಹೆಚ್ಚಾಗಿದ್ದು, ಕಳೆದೊಂದು ವಾರದಲ್ಲಿ ಮನೆಯಲ್ಲಿ ಕ್ವಾರಂಟೈನ್ ಆಗಿರುವವರ ಸಂಖ್ಯೆ ಶೇ 48ರಷ್ಟಿದೆ ಎಂದು ಸರ್ಕಾರದ ದತ್ತಾಂಶಗಳು ತಿಳಿಸಿವೆ. ಗುರುವಾರ ಒಂದೇ ದಿನ 325 ಕೋವಿಡ್ ಪ್ರಕರಣಗಳು ಪತ್ತೆಯಾಗಿ, ಪಾಸಿಟಿವಿಟಿ ದರವು ಶೇ 2.39ರಷ್ಟಾಗಿತ್ತು. ಇನ್ನು ಸೋಂಕಿಗೆ ತುತ್ತಾಗಿ 574 ಮಂದಿ ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು, ಚಿಕಿತ್ಸೆ ಪಡೆಯುತ್ತಿದ್ದಾರೆ.

ದೆಹಲಿ: ಮುನ್ನೆಚ್ಚರಿಕಾ ಡೋಸ್ ಉಚಿತ

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಕೊರೊನಾ ಲಸಿಕೆಯ ಮುನ್ನೆಚ್ಚರಿಕಾ ಡೋಸ್‌ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಶೀಘ್ರವೇ ಉಚಿತವಾಗಿ ನೀಡಲಾಗುತ್ತದೆ ದೆಹಲಿ ಸರ್ಕಾರ ಘೋಷಣೆ ಮಾಡಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹರಿಗೆ ಖಾಸಗಿ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕೋವಿಡ್ ಡೋಸ್ ನೀಡಿಕೆಯನ್ನು ಭಾನುವಾರದಿಂದ ಆರಂಭಿಸಲಾಗಿದೆ. ಲಸಿಕೆಯ 2ನೇ ಡೋಸ್ ಪಡೆದು 9 ತಿಂಗಳು ಪೂರೈಸಿದ ಎಲ್ಲರೂ ಸಹ ಮುನ್ನೆಚ್ಚರಿಕಾ ಡೋಸ್‌ಗೆ ಅರ್ಹವಾಗಿರಲಿದ್ದಾರೆ.

ಸೋಂಕು ಪತ್ತೆಯಾದ ತರಗತಿ ಮುಚ್ಚಿ: ಡಿಸಿಎಂ

ದೆಹಲಿಯ ಹೆಚ್ಚಿನ ಮಕ್ಕಳಲ್ಲಿ ಶುಕ್ರವಾರ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದು ಪೋಷಕರ ಕಳವಳಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಶಾಲಾ ತರಗತಿಗಳು ಮತ್ತು ನಿಗದಿತ ಭಾಗಗಳನ್ನು ಮುಚ್ಚುವಂತೆ ದೆಹಲಿ ಸರ್ಕಾರ ಶಾಲೆಗಳಿಗೆ ಸೂಚನೆ ನೀಡಿದೆ.

ಅಂಬೇಡ್ಕರ್ ಜಯಂತಿ, ಗುಡ್ ಫ್ರೈಡೆ ಹಾಗೂ ವಾರಾಂತ್ಯ ಸೇರಿದಂತೆ ಒಟ್ಟಾರೆ 4 ದಿನಗಳ ಕಾಲ ಶಾಲೆಗಳಿಗೆ ರಜೆ ನೀಡಲಾಗಿದೆ.ಈ ನಡುವೆ ಕಳೆದ ವಾರ ವಸಂತ ಕುಂಜ್ ಎಂಬಲ್ಲಿರುವ ಖಾಸಗಿ ಶಾಲೆಯ ಐವರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಸೋಂಕು ದೃಢಪಟ್ಟಿದ್ದು, ಪೋಷಕರನ್ನು ಆತಂಕಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ಪತ್ತೆಯಾದ ತರಗತಿ ಅಥವಾ ಶಾಲೆಯ ಆ ಭಾಗವನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT