ಮಂಗಳವಾರ, ಡಿಸೆಂಬರ್ 7, 2021
24 °C

ದೆಹಲಿ ಮಳೆ ಹಾನಿ: ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ–ಕೇಜ್ರಿವಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡಲು ಆದೇಶ ಹೊರಡಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬುಧವಾರ ಹೇಳಿದ್ದಾರೆ. 

ಕಂದಾಯ ಅಧಿಕಾರಿಗಳು ಹಾನಿಗೊಳಗಾದ ಬೆಳೆಗಳ ಸಮೀಕ್ಷೆ ನಡೆಸುತ್ತಿದ್ದು ಎರಡು ವಾರಗಳಲ್ಲಿ ಪೂರ್ಣಗೊಳ್ಳಲಿದೆ. ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ದರದಲ್ಲಿ ಎರಡು ತಿಂಗಳಲ್ಲಿ ಪರಿಹಾರವನ್ನು ಒದಗಿಸಲಾಗುವುದು ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.  

ರೈತರಿಗೆ ಸಹಾಯ ಮಾಡಲು ದೆಹಲಿ ಸರ್ಕಾರವು ಬದ್ಧವಾಗಿದೆ. ಈ ಹಿಂದೆಯೂ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರವನ್ನು ಪಾವತಿಸಿದೆ. ಇದು ದೇಶದಲ್ಲೇ ರೈತರಿಗೆ ಪಾವತಿಸಿದ ಅತಿಹೆಚ್ಚು ಪರಿಹಾರವಾಗಿದೆ ಎಂದು ಅವರು ಹೇಳಿದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು