ಗುರುವಾರ , ಮಾರ್ಚ್ 23, 2023
29 °C

ನವದೆಹಲಿ: ಶಸ್ತ್ರಸಜ್ಜಿತ ದುಷ್ಕರ್ಮಿಗಳಿಂದ ಯುವಕನಿಗೆ 9 ಸಲ ಇರಿತ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಆತಂಕಕಾರಿ ಘಟನೆಯೊಂದರಲ್ಲಿ ಅರ್ಧ ಡಜನ್ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಗಲಿನ ವೇಳೆಯೇ ಯುವಕನ ಮೇಲೆ ಅಮಾನುಷವಾಗಿ ದಾಳಿ ಮಾಡಿ, ಅಟ್ಟಾಡಿಸಿಕೊಂಡು ಇರಿದು, ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಪೂರ್ವ ದೆಹಲಿಯ ಮಯೂರ್ ವಿಹಾರ್‌ನಲ್ಲಿ ಭಾನುವಾರ ನಡೆದಿದೆ.

ಇಡೀ ಘಟನೆ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ ಎಂದು ಐಎಎನ್‌ಎಸ್‌ ವರದಿ ಮಾಡಿದೆ.

ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಇರಿದು, ರಕ್ತದ ಮಡುವಿನಲ್ಲಿ ಬಿಟ್ಟು ಹೋಗಿದ್ದಾರೆ.  ಒಂಬತ್ತು ಬಾರಿ ಇರಿದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂತ್ರಸ್ತ ಯುವಕನನ್ನು ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ತಂಡ  ರಚಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು