ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ: ಥೋಮರ್‌ಗೆ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಣೆ

Last Updated 27 ಆಗಸ್ಟ್ 2021, 9:35 IST
ಅಕ್ಷರ ಗಾತ್ರ

‌ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕೋಮು ಭಾವನೆಯನ್ನು ಪ್ರಚೋದಿಸುವ ಘೋಷಣೆಗಳನ್ನು ಕೂಗಿದ ಆರೋಪ ಎದುರಿಸುತ್ತಿರುವ ಹಿಂದೂ ರಕ್ಷಾ ದಳದ ಅಧ್ಯಕ್ಷ ಭೂಪಿಂದರ್‌ ಥೋಮರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು ಥೋಮರ್‌ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿ ಮಾಡಿದ್ದು, ಈ ಪ್ರಕರಣ ಸಂಬಂಧ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊದಲು ವಸ್ತುಸ್ಥಿತಿ ವರದಿಯನ್ನು ಸಲ್ಲಿಸಲಿ ಎಂದ ನ್ಯಾಯಮೂರ್ತಿಯವರು ವಿಚಾರಣೆಯನ್ನು ಸೆಪ್ಟೆಂಬರ್‌ 13ಕ್ಕೆ ನಿಗದಿಪಿಡಿಸಿದರು.

‘ಜಂತರ್‌ ಮಂತರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಥೋಮರ್‌ ಅವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಲಿಲ್ಲ. ಅಲ್ಲದೆ ರ‍್ಯಾಲಿಯನ್ನು ಅವರು ಆಯೋಜಿಸಿಲ್ಲ. ಆದರೆ, ಆ ರ‍್ಯಾಲಿಯ ಆಯೋಜಕರಿಗೆ ಈಗಾಗಲೇ ಜಾಮೀನು ಸಿಕ್ಕಿದೆ’ ಎಂದು ಥೋಮರ್‌ ಪರ ವಕೀಲರು ವಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT