ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಅಭ್ಯರ್ಥಿಗಳ ಮೌಲ್ಯಮಾಪನ; ಸಿಬಿಎಸ್‌ಇಗೆ ಪ್ರತಿಕ್ರಿಯಿಸಲು ಇನ್ನಷ್ಟು ಸಮಯ

Last Updated 1 ಆಗಸ್ಟ್ 2021, 9:43 IST
ಅಕ್ಷರ ಗಾತ್ರ

ನವದೆಹಲಿ: ಹತ್ತನೇ ತರಗತಿ ಖಾಸಗಿ ವಿದ್ಯಾರ್ಥಿಗಳ ಪರೀಕ್ಷೆಯ ಮೌಲ್ಯಮಾಪನ ವಿಧಾನಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಯ ಬಗ್ಗೆ ತನ್ನ ನಿಲುವು ವ್ಯಕ್ತಪಡಿಸಲು ಸಿಬಿಎಸ್‌ಇಗೆ ದೆಹಲಿ ನ್ಯಾಯಾಲಯವು ಹೆಚ್ಚುವರಿ ಸಮಯವನ್ನು ನೀಡಿದೆ.

ಈ ಸಂಬಂಧ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬರ ತಾಯಿ ಪಯಾಲ್‌ ಬೆಹಲ್‌ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

‘ಕೋವಿಡ್‌ ಪಿಡುಗಿನಿಂದಾಗಿ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಘೋಷಿಸಲಾಯಿತು. ಆದರೆ ಖಾಸಗಿಯಾಗಿ ಪರೀಕ್ಷೆಗೆ ಬರೆದ ವಿದ್ಯಾರ್ಥಿಗಳಿಗೆ ಯಾವ ಮೌಲ್ಯಮಾಪನ ವಿಧಾನದ ಮೂಲಕ ಅಂಕಗಳನ್ನು ನೀಡಬೇಕು ಎಂಬುದರ ಕುರಿತಾಗಿ ಸಿಬಿಎಸ್‌ಇ ಯಾವುದೇ ಅಧಿಸೂಚನೆಗಳನ್ನು ಹೊರಡಿಸಿಲ್ಲ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಈ ಅರ್ಜಿ ಬಗ್ಗೆ ಪ್ರತಿಕ್ರಿಯಿಸುವಂತೆ ನ್ಯಾಯಾಲಯವು ಸಿಬಿಎಸ್‌ಇಗೆ ಸೂಚಿಸಿತ್ತು. ಆದರೆ ಸಿಬಿಎಸ್‌ಇ ಪರ ವಕೀಲರಾದ ರೂಪೇಶ್‌ ಕುಮಾರ್‌ ಅವರು ಖಾಸಗಿ ಶಾಲೆಗಳ ಮೌಲ್ಯಮಾಪನ ವಿಧಾನದ ಬಗ್ಗೆ ವಿವರಣೆ ನೀಡಲು 10 ದಿನಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಜುಲೈ 29ರಂದು ನ್ಯಾಯಮೂರ್ತಿ ಪ್ರತೀಕ್‌ ಜಲಾನ್‌ ಅವರು ಸಿಬಿಎಸ್‌ಇಗೆ ಇನ್ನಷ್ಟು ಸಮಯಾವಕಾಶ ನೀಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ಅರ್ಜಿ ವಿಚಾರಣೆಯನ್ನು ಆಗಸ್ಟ್‌ 23ಕ್ಕೆ ನಿಗದಿ ಮಾಡಿದ್ದಾರೆ.

ಈ ಹಿಂದೆ ನ್ಯಾಯಾಲಯವು ಅರ್ಜಿ ಬಗ್ಗೆ ಪ್ರತಿಕ್ರಿಯಿಸಲು ಸಿಬಿಎಸ್‌ಇಗೆ ಮೂರು ವಾರಗಳ ಸಮಯ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT