ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾಹಕ್ಕೆ ಏಕರೂಪ ಕನಿಷ್ಠ ವಯಸ್ಸು: ಅರ್ಜಿ ಸುಪ್ರೀಂ ಕೋರ್ಟ್‌ ಅಂಗಳಕ್ಕೆ

Last Updated 31 ಜನವರಿ 2023, 14:42 IST
ಅಕ್ಷರ ಗಾತ್ರ

ನವದೆಹಲಿ: ಪುರುಷರು ಮತ್ತು ಮಹಿಳೆಯರಿಗೆ ಮದುವೆಯ ಕನಿಷ್ಠ ವಯಸ್ಸಿನ ಏಕರೂಪತೆಗೆ ಕೋರಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿದೆ.

ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್ ಅವರಿದ್ದ ಪೀಠವು, ಸುಪ್ರೀಂ ಕೋರ್ಟ್ ಜನವರಿ 13ರಂದು ನೀಡಿರುವ ಆದೇಶದ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿತು. ಸುಪ್ರೀಂ ಕೋರ್ಟ್‌ ಆದೇಶದಂತೆ ಪ್ರಸ್ತುತ ಅರ್ಜಿಯು ವರ್ಗಾವಣೆಯಾಗಿದೆ ಎಂದು

‘ಈ ವಿಷಯವನ್ನು ತಕ್ಷಣದಿಂದಲೇ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಲಾಗಿದೆ. ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸುಪ್ರೀಂ ಕೋರ್ಟ್‌ಗೆ ರವಾನಿಸಲು ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ’ ಎಂದು ಪೀಠ ಹೇಳಿತು.

ಪುರುಷರು ಮತ್ತು ಮಹಿಳೆಯರಿಗೆ ವಿವಾಹದ ಕಾನೂನಾತ್ಮಕ ಕನಿಷ್ಠ ವಯಸ್ಸಿನಲ್ಲಿ ಸಮಾನತೆ ಇರಬೇಕೆಂದು ವಕೀಲ ಮತ್ತು ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು. ಇದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇತ್ತು. ಜ.13ರಂದು ಸುಪ್ರೀಂ ಕೋರ್ಟ್‌ ಈ ಅರ್ಜಿಯನ್ನು ತನ್ನ ಪರಿಧಿಗೆ ವರ್ಗಾಯಿಸಿಕೊಂಡಿತು.

ದೇಶದಲ್ಲಿ ಮದುವೆಗೆ ಕನಿಷ್ಠ ವಯಸ್ಸಿನ ಮಿತಿಯನ್ನು ಪುರುಷರಿಗೆ 21 ಮತ್ತು ಮಹಿಳೆಯರಿಗೆ 18 ವರ್ಷ ನಿಗದಿಪಡಿಸಲಾಗಿದೆ. ಇದು ಲಿಂಗತಾರತಮ್ಯದಿಂದ ಕೂಡಿದೆ. ಇದನ್ನು ಸರಿಪಡಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಗೆ ತನ್ನ ಪ್ರತಿಕ್ರಿಯೆ ಸಲ್ಲಿಸಲು ಉನ್ನತ ನ್ಯಾಯಾಲಯವು ಕೇಂದ್ರಕ್ಕೆ ಸಮಯಾವಕಾಶ ನೀಡಿದೆ. ಮಾತೃತ್ವಕ್ಕೆ ಕಾಲಿಡುವ ಕನಿಷ್ಠ ವಯಸ್ಸಿನ ಬಗ್ಗೆ ಅಧ್ಯಯನಕ್ಕೆ ಕಾರ್ಯಪಡೆ ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಮಾಹಿತಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT