ಸೋಮವಾರ, ಆಗಸ್ಟ್ 8, 2022
23 °C
ಹಣ ಅಕ್ರಮ ವರ್ಗಾವಣೆ ಪ್ರಕರಣ

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನ್ಯಾಯಾಂಗ ಬಂಧನ ಅವಧಿ 2 ವಾರ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ಎರಡು ವಾರ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಕೋರಿ ಜಾರಿ ನಿರ್ದೇಶನಾಲಯದ (ಇ.ಡಿ)  ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಈ ಆದೇಶ ಹೊರಡಿಸಿದ್ದಾರೆ.

57 ವರ್ಷದ ಜೈನ್ ಅವರನ್ನು ಇ.ಡಿ ಮೇ 30ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿತ್ತು. ಕಳೆದ ವಾರ ಆಮ್ಲಜನಕ ಪ್ರಮಾಣ ಕುಸಿದ ಹಿನ್ನೆಲೆಯಲ್ಲಿ ಜೈನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು