ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಮ್ಸ್‌ ಶುಶ್ರೂಷಕರು ಮುಷ್ಕರ ಮುಂದುವರಿಸದಂತೆ ದೆಹಲಿ ಹೈಕೋರ್ಟ್‌ ಸೂಚನೆ

Last Updated 15 ಡಿಸೆಂಬರ್ 2020, 16:46 IST
ಅಕ್ಷರ ಗಾತ್ರ

ನವದೆಹಲಿ: ಕರ್ತವ್ಯಕ್ಕೆ ಹಾಜರಾಗುವಂತೆ ಮುಷ್ಕರ ನಿರತ ಏಮ್ಸ್‌ ಶುಶ್ರೂಷಕರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಸೂಚನೆ ನೀಡಿದೆ.

ಆರನೇ ವೇತನ ಆಯೋಗದ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶುಶ್ರೂಷಕರ ಒಕ್ಕೂಟ ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ.

ಶುಶ್ರೂಷಕರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಏಮ್ಸ್‌ ಭರವಸೆ ನೀಡಿರುವುದನ್ನು ಆಧರಿಸಿ ಮುಷ್ಕರ ಮುಂದುವರಿಸದಂತೆ ಹೈಕೋರ್ಟ್‌ ನ್ಯಾಯಮೂರ್ತಿ ನವೀನ್‌ ಚಾವ್ಲಾ ಆದೇಶಿಸಿದ್ದಾರೆ.

ಈ ಸಂಬಂಧ ಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು 2021ರ ಜನವರಿ 18ಕ್ಕೆ ನಿಗದಿ ಪಡಿಸಿದೆ. ಮುಷ್ಕರ ನಿರತರೊಂದಿಗೆ ಮಾತುಕತೆ ನಡೆಸಲು ಏಮ್ಸ್‌ ಆಡಳಿತ ಮಂಡಳಿಯು ಆಹ್ವಾನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT