ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ಜುಬೈರ್ ಬಂಧನದ ಕುರಿತು ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ದೆಹಲಿ ಪೊಲೀಸರ ಬಂಧನ ಪ್ರಶ್ನಿಸಿ ಕೋರ್ಟ್ ಮೊರೆ ಹೋದ ಆಲ್ಟ್‌ ನ್ಯೂಸ್ ಸಹಸಂಸ್ಥಾಪಕ
Last Updated 12 ಜುಲೈ 2022, 6:47 IST
ಅಕ್ಷರ ಗಾತ್ರ

ನವದೆಹಲಿ: ಹಿಂದೂ ದೇವರ ಕುರಿತು 2018ರಲ್ಲಿ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್‌ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವ ದೆಹಲಿ ಪೊಲೀಸರ ಕಾನೂನುಬದ್ಧತೆಯನ್ನು ಪ್ರಶ್ನಿಸಿ ‘ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್‌’ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಮಾಡಿದ ಮನವಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಪೊಲೀಸರ ನಿಲುವನ್ನು ಕೇಳಿದೆ.

ನ್ಯಾಯಮೂರ್ತಿ ಸಂಜೀವ್ ನರೂಲ ಅವರು ಈ ಸಂಬಂಧ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಜುಬೈರ್‌ ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ವಿಚಾರಣಾ ನ್ಯಾಯಾಲಯದ ಜೂನ್ 28ರ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ತನಿಖಾ ಸಂಸ್ಥೆಗೆ ಎರಡು ವಾರಗಳ ಕಾಲಾವಕಾಶ ನೀಡಿದರು.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿದನ್ಯಾಯಮೂರ್ತಿ, ‘ಪ್ರಸ್ತುತ ಪ್ರಕ್ರಿಯೆಗಳಿಗೆ ಪ್ರಭಾವಿತರಾಗದೆ ವಿಚಾರಣಾ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗಳು ನಡೆಯಲಿವೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT