ದೆಹಲಿ ಅಪಘಾತ ಪ್ರಕರಣ: ಕಾರು ಮಾಲೀಕ ಪೊಲೀಸ್ ವಶಕ್ಕೆ

ನವದೆಹಲಿ: ಕಾರಿನಡಿ ಸಿಲುಕಿದ್ದ ಯುವತಿಯ ದೇಹವನ್ನು ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾರು ಮಾಲೀಕ ಅಶುತೋಷ್ರನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಗುರುವಾರ ಐದು ಮಂದಿ ಆರೋಪಿಗಳ ಬಂಧನವಾಗಿತ್ತು. ಅವರನ್ನು ದೆಹಲಿ ನ್ಯಾಯಾಲಯ ನಾಲ್ಕು ದಿನಗಳವರೆಗೆ ಪೊಲೀಸ್ ವಶಕ್ಕೆ ನೀಡಿದೆ. ಬಂಧಿತರ ಪೈಕಿ ಓರ್ವ, ಅಪಘಾತ ನಡೆದಾಗ ಕಾರಿನಲ್ಲಿ ಇರಲಿಲ್ಲ ಎಂದು ಮೂಲಗಳು ಹೇಳಿವೆ.
ವಿಚಾರಣೆಯ ಸಂದರ್ಭದಲ್ಲಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರ ವಿವರವನ್ನು ಪೊಲೀಸರು ಕಲೆ ಹಾಕಿದ್ದರು.
ಅದರಂತೆ ಅಶುತೋಷ್ ಮತ್ತು ಅಂಕುಶ್ ಖನ್ನಾ ಎನ್ನುವವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣ: ಡಿಎನ್ಎ ಹೋಲಿಕೆ
ಹೊಸ ವರ್ಷಾಚರಣೆಯ ರಾತ್ರಿ ದೆಹಲಿಯಲ್ಲಿ ಅಂಜಲಿ ಸಿಂಗ್ (20) ಅವರ ಚಲಾಯಿಸುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿತ್ತು. ನಂತರ ಮೃತದೇಹವನ್ನು 13 ಕಿ.ಮೀ. ದೂರದವರೆಗೂ ಎಳೆದುಕೊಂಡು ಹೋಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.