ಗುರುವಾರ , ಆಗಸ್ಟ್ 11, 2022
23 °C

ಫೇಸ್‌ಬುಕ್‌ ಇಂಡಿಯಾ ಉಪಾಧ್ಯಕ್ಷ ಅಜಿತ್‌ ಮೋಹನ್‌ಗೆ ಸಮನ್ಸ್‌

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ವಿಧಾನಸಭೆಯ 'ಶಾಂತಿ ಮತ್ತು ಸಾಮರಸ್ಯ' ಸಮಿತಿಯು ಫೇಸ್‌ಬುಕ್ ಇಂಡಿಯಾದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಅವರಿಗೆ ಸಮನ್ಸ್‌ ನೀಡಿದೆ.

'ದ್ವೇಷ ಭಾಷಣ ಕುರಿತ ನಿಯಮಗಳನ್ನು ಅನ್ವಯಿಸಲು ಫೇಸ್‌ಬುಕ್ ಉದ್ದೇಶಪೂರ್ವಕವಾಗಿ ನಿಷ್ಕ್ರಿಯವಾಗಿದೆ. ದೆಹಲಿಯಲ್ಲಿ ಶಾಂತಿ ಮತ್ತು ಸಾಮರಸ್ಯ ಹದಗೆಡುವುದಕ್ಕೆ ಇಂತಹ ಭಾಷಣಗಳು ಕಾರಣವಾಗಿವೆ' ಎಂದು ಸಮಿತಿ ಆರೋಪಿಸಿದೆ.

‘ದ್ವೇಷ ಭಾಷಣ ನಿಯಮಗಳನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜಕಾರಣಿ ಮತ್ತು ಇತರ ಹಿಂದೂ ರಾಷ್ಟ್ರೀಯವಾದಿ ವ್ಯಕ್ತಿಗಳು ಮತ್ತು ಗುಂಪುಗಳಿಗೆ ಅನ್ವಯಿಸುವುದನ್ನು ಫೇಸ್‌ಬುಕ್‌ ಭಾರತದ ಹಿರಿಯ ಅಧಿಕಾರಿಯೊಬ್ಬರು ವಿರೋಧಿಸಿದ್ದರು. ಬಿಜೆಪಿ ನಾಯಕರ ದ್ವೇಷ ಭಾಷಣಗಳನ್ನು ಫೇಸ್‌ಬುಕ್‌ ನಿರ್ಲಕ್ಷಿಸುತ್ತಿದೆ,’ ಎಂದು ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಕಳೆದ ತಿಂಗಳು ವರದಿ ಮಾಡಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು