ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಎಎಪಿ ಶಾಸಕರಿಗೆ ಲೀಗಲ್‌ ನೋಟಿಸ್‌

Last Updated 5 ಸೆಪ್ಟೆಂಬರ್ 2022, 19:45 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಎಎಪಿ ಶಾಸಕರಾದ ಅತೀಶಿ, ದುರ್ಗೇಶ್‌ ಪಾಠಕ್‌, ಸೌರಭ್‌ ಭಾರದ್ವಾಜ್‌, ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌, ಮುಖಂಡ ಜಸ್ಮೈನ್‌ ಶಾ ಹಾಗೂ ಇತರರಿಗೆ ಸೋಮವಾರ ಲೀಗಲ್‌ ನೋಟಿಸ್‌ ನೀಡಿದ್ದಾರೆ.

ತಮ್ಮ ವಿರುದ್ಧ ಸುಳ್ಳು, ಅವಹೇಳನಕಾರಿ ಹೇಳಿಕೆ ನೀಡುವುದನ್ನು ಹಾಗೂ ಆಧಾರರಹಿತವಾಗಿ ಆರೋಪ ಮಾಡುವುದನ್ನು ನಿಲ್ಲಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಸಕ್ಸೇನಾ ಅವರು2016ರಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ (ಕೆವಿಐಸಿ) ಅಧ್ಯಕ್ಷರಾಗಿದ್ದಾಗ ಅಮಾನ್ಯೀಕರಣಗೊಂಡಿದ್ದ ₹1,400 ಕೋಟಿ ಮೌಲ್ಯದ ನೋಟುಗಳನ್ನು ಬದಲಾಯಿಸಿಕೊಡುವಂತೆ ತಮ್ಮ ಸಹೋದ್ಯೋಗಿಗಳ ಮೇಲೆ ಒತ್ತಡ ಹೇರಿದ್ದಾಗಿ ಎಎಪಿ ಶಾಸಕ ದುರ್ಗೇಶ್ ಪಾಠಕ್ ಹೋದ ವಾರ ವಿಧಾನಸಭೆಯಲ್ಲಿ ಆರೋಪಿಸಿದ್ದರು.

ಲೆಫ್ಟಿನೆಂಟ್ ಗವರ್ನರ್‌ ಹುದ್ದೆಯಿಂದ ಸಕ್ಸೇನಾ ಅವರನ್ನು ಕೆಳಗಿಳಿಸಬೇಕೆಂದು ಎಎಪಿ ಶಾಸಕರು ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT