ಸೋಮವಾರ, ಜೂನ್ 21, 2021
29 °C

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಕೋವಿಡ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಕೋವಿಡ್ -19 ಪಾಸಿಟಿವ್ ಆಗಿದೆ. ಅಲ್ಪ ಪ್ರಮಾಣದ ರೋಗಲಕ್ಷಣಗಳನ್ನು ಹೊಂದಿದ್ದು, ಪ್ರತ್ಯೇಕ ವಾಸದಲ್ಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಮನೆಯಿಂದಲೇ ದೆಹಲಿಯ ಸ್ಥಿತಿ ಗತಿ ಬಗ್ಗೆ ಮೇಲ್ವಿಚಾರಣೆ ನಡೆಸುವ ಮೂಲಕ ಕಾರ್ಯನಿರ್ವಹಿಸುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.

ಈಗ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಹೆಚ್ಚಿನ ಅಧಿಕಾರವಿದೆ. ರಾಷ್ಟ್ರೀಯ ರಾಜಧಾನಿ ದೆಹಲಿ (ತಿದ್ದುಪಡಿ) ಕಾಯ್ದೆ–2021 ಏ. 27ರಿಂದ ಜಾರಿಗೆ ಬಂದಿದೆ. ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್‌ ಗವರ್ನರ್‌ಗೆ ಈ ಕಾಯ್ದೆ ಹೆಚ್ಚಿನ ಅಧಿಕಾರ ನೀಡುತ್ತದೆ.

ನಗರಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೆ, ಅನುಷ್ಠಾನಕ್ಕಾಗಿ ಅಲ್ಲಿನ ಸರ್ಕಾರ ಲೆಫ್ಟಿನೆಂಟ್‌ ಗವರ್ನರ್‌ ಅವರ ಅಭಿಪ್ರಾಯದಂತೆ ನಡೆಯಬೇಕಿರುವುದರಿಂದ ಕೋವಿಡ್ ಕಾಲದಲ್ಲಿ ಅವರ ಜವಾಬ್ದಾರಿ ಹೆಚ್ಚಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು