ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾಗೆ 2 ವಾರಗಳ ನ್ಯಾಯಾಂಗ ಬಂಧನ

Last Updated 22 ಮಾರ್ಚ್ 2023, 10:03 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐನಿಂದ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್‌ ಸಿಸೋಡಿಯಾ ಅವರನ್ನುಇಲ್ಲಿನ ವಿಶೇಷ ನ್ಯಾಯಾಲಯವು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಿಶೇಷ ನ್ಯಾಯಮೂರ್ತಿ ಎಂ.ಕೆ ನಾಗಪಾಲ್‌ ಅವರು, ಸಿಸೋಡಿಯಾ ಅವರನ್ನು ಏಪ್ರಿಲ್ 15ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ಪ್ರಕರಣ ಸಂಬಂಧ ಸಿಬಿಐನಿಂದ ಬಂಧಿತರಾಗಿದ್ದ ಮನೀಶ್‌ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಮಾರ್ಚ್‌ 9 ರಂದು ಬಂಧಿಸಿತ್ತು.

ವಿಚಾರಣೆ ವೇಳೆ, ತಮ್ಮ ಪತಿ ಅನಾರೋಗ್ಯ ಪೀಡಿತೆಯಾಗಿದ್ದು, ಅವರನ್ನು ನೋಡಿಕೊಳ್ಳಬೇಕಾಗಿದೆ. ಪುತ್ರ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಸಿಸೋಡಿಯಾ ಪರ ವಕೀಲರು ಮನವಿ ಮಾಡಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಸಿಸೋಡಿಯಾ ಅವರು ಸರ್ಕಾರ ಉನ್ನತ ಸ್ಥಾನದಲ್ಲಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇದೆ ಹೀಗಾಗಿ ಜಾಮೀನು ನೀಡಬಾರದು ಎಂದು ಆಗ್ರಹಿಸಿದರು.

ಸಿಸೋಡಿಯಾ ಅವರು ಸಿಬಿಐ ತನಿಖೆಗೆ ಸಹಕರಿಸುತ್ತಿದ್ದಾರೆ. ಆದರೆ ಅವರ ಪರವಾಗಿ ಯಾವ ಸಾಕ್ಷಿಯೂ ಸಿಕ್ಕಿಲ್ಲ. ಹೀಗಾಗಿ ಅವರ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಸಿಸೋಡಿಯಾ ಪರ ವಕೀಲರು ವಾದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT