ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಆರೋಪ: ಎಎಪಿ ನಾಯಕರ ವಿರುದ್ಧ ಕ್ರಮಕ್ಕೆ ಮುಂದಾದ ದೆಹಲಿ ಲೆ. ಗವರ್ನರ್

Last Updated 31 ಆಗಸ್ಟ್ 2022, 14:52 IST
ಅಕ್ಷರ ಗಾತ್ರ

ನವದೆಹಲಿ; ತಮ್ಮ ವಿರುದ್ಧದ ಸುಳ್ಳು ಭ್ರಷ್ಟಾಚಾರ ಆರೋಪ ಮಾಡಿರುವ ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ದುರ್ಗೇಶ್ ಪಾಠಕ್ ಸೇರಿದಂತೆ ಎಎಪಿ ನಾಯಕರ ವಿರುದ್ಧ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿದ್ದಾಗ ₹ 1400 ಕೋಟಿ ಭ್ರಷ್ಟಾಚಾರದ ಎಸಗಿದ್ದಾರೆ ಎಂದು ಎಎಪಿ ನಾಯಕರು ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಸಕ್ಸೇನಾ ತಳ್ಳಿಹಾಕಿದ್ದು, ಇದು ಅವರ ಕಲ್ಪನೆಯಾಗಿದೆ ಎಂದು ಹೇಳಿದ್ದಾರೆ.

ದೆಹಲಿಯ ಅಭಿವೃದ್ಧಿ ಆಯೋಗದ ಉಪಾಧ್ಯಕ್ಷರಾಗಿರುವ ಜಾಸ್ಮಿನ್ ಶಾ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT