ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಸೋಮವಾರದಿಂದ ಪೂರ್ಣ ಆಸನ ಸಾಮರ್ಥ್ಯದಲ್ಲಿ ಮೆಟ್ರೋ, ಬಸ್ ಸಂಚಾರ

Last Updated 24 ಜುಲೈ 2021, 14:39 IST
ಅಕ್ಷರ ಗಾತ್ರ

ನವದೆಹಲಿ: ಸೋಮವಾರದಿಂದ ದೆಹಲಿ ಮೆಟ್ರೋ ಮತ್ತು ಸಾರ್ವಜನಿಕ ಬಸ್‌ಗಳು ಪೂರ್ಣ ಆಸನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಸಿನೆಮಾ ಹಾಲ್‌ಗಳು, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ಶೇಕಡಾ 50 ರಷ್ಟು ಆಸನ ಭರ್ತಿಯೊಂದಿಗೆ ತೆರೆಯಲಿವೆ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಬಿಡುಗಡೆ ಮಾಡಿರುವ ಹೊಸ ಅನ್‌ಲಾಕ್ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ .

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೊರೊನಾ ವೈರಸ್‌ನ ಎರಡನೇ ಅಲೆಯ ಸಂದರ್ಭದಲ್ಲಿ ನಗರವು ಹಿಂದೆಂದೂ ಕಾಣದ ರೀತಿಯಲ್ಲಿ ಕೋವಿಡ್ ಪ್ರಕರಣಗಳು ಮತ್ತು ಸಾವುಗಳಿಗೆ ಸಾಕ್ಷಿಯಾಯಿತು. ಕಳೆದ ಕೆಲವು ವಾರಗಳಿಂದ ಪರಿಸ್ಥಿತಿ ಸುಧಾರಿಸುತ್ತಿದೆ. ಹಾಗಾಗಿ, ಹಂತ ಹಂತವಾಗಿ ನಗರದ ಅನ್‌ಲಾಕ್ ಪ್ರಕ್ರಿಯೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಇತ್ತೀಚಿನ ಅನ್‌ಲಾಕ್ ಮಾರ್ಗಸೂಚಿಗಳು ನಗರದ ಜೀವಸೆಲೆ ದೆಹಲಿ ಮೆಟ್ರೊಗೆ ಸೋಮವಾರದಿಂದ ಶೇಕಡಾ 100 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು. ಆದರೆ, ಯಾವುದೇ ಪ್ರಯಾಣಿಕರನ್ನು ನಿಂತು ಪ್ರಯಾಣಿಸಲು ಅನುಮತಿಸಲಾಗುವುದಿಲ್ಲ ಎಂದು ತಿಳಿಸಿದೆ.

ಜುಲೈ 26 ರಿಂದ ಸಿನಿಮಾ ಹಾಲ್‌ಗಳು, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳನ್ನು ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದೆ.

ಮದುವೆ ಸಮಾರಂಭಗಳಲ್ಲಿ ಸೇರುವವ ಜನರ ಸಂಖ್ಯೆ ಮತ್ತು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರ ಸಂಖ್ಯೆ 100 ಕ್ಕೆ ಏರಿಸಲಾಗುವುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT