ಭಾನುವಾರ, ಮೇ 16, 2021
22 °C

ದೆಹಲಿ: ಹಲವು ಮೆಟ್ರೊ ನಿಲ್ದಾಣಗಳ ಪ್ರವೇಶ ದ್ವಾರ ಬಂದ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ದೆಹಲಿಯ ಹಲವು ಮೆಟ್ರೊ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ತಾತ್ಕಲಿಕವಾಗಿ ಮುಚ್ಚಲು ದೆಹಲಿ ಮೆಟ್ರೊ ರೈಲು ಕಾರ್ಪೊರೇಷನ್‌ (ಡಿಎಂಆರ್‌ಸಿ) ಮಂಗಳವಾರ ನಿರ್ಧರಿಸಿದೆ.

ದೆಹಲಿಯಲ್ಲಿ ಆರು ದಿನಗಳ ಲಾಕ್‌ಡೌನ್‌ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮೆಟ್ರೊ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. 

‘ಆರು ದಿನಗಳ ಲಾಕ್‌ಡೌನ್‌ನಲ್ಲಿ ಮೆಟ್ರೊ ರೈಲುಗಳು ಕಡಿಮೆ ಪ್ರಮಾಣದಲ್ಲಿ ಚಲಿಸಲಿವೆ. ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ಮತ್ತು ಸಂಜೆ 5ರಿಂದ 7ಗಂಟೆಯವರೆಗೆ ಮೆಟ್ರೊ ಲಭ್ಯವಿರಲಿದೆ. ಕೆಲವೊಂದು ವರ್ಗದ ಜನರಿಗೆ ಮಾತ್ರ ಗುರುತಿನ ಚೀಟಿಯೊಂದಿಗೆ ಮೆಟ್ರೊದಲ್ಲಿ ಪ್ರಯಣಿಸಲು ಅನುಮತಿ ನೀಡಲಾಗಿದೆ’ ಎಂದು ತಿಳಿಸಲಾಗಿದೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು