ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಮೆಟ್ರೊ: ದೇಶೀಯ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆ

Last Updated 18 ಫೆಬ್ರುವರಿ 2023, 13:56 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮೆಟ್ರೊದ ಕೆಂಪು ಮಾರ್ಗದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಸಿಗ್ನಲಿಂಗ್ ತಂತ್ರಜ್ಞಾನ ಮತ್ತು ಮೇಲ್ವಿಚಾರಣಾ ವ್ಯವಸ್ಥೆಯನ್ನು (ಐ–ಎಟಿಎಸ್‌) ಶನಿವಾರ ಉದ್ಘಾಟಿಸಲಾಯಿತು.

‘ಮೇಕ್ ಇನ್ ಇಂಡಿಯಾ’ ಮತ್ತು ‘ಆತ್ಮನಿರ್ಭರ ಭಾರತ್’ ಅಡಿ ದೆಹಲಿ ಮೆಟ್ರೊ ರೈಲು ನಿಗಮ (ಡಿಎಂಆರ್‌ಸಿ) ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಜಂಟಿ ತಂಡ ದೇಶದ ಮೊದಲ ಐ–ಎಟಿಎಸ್‌ ವ್ಯವಸ್ಥೆಯನ್ನು ರೂಪಿಸಿದೆ.

ಡಿಎಂಆರ್‌ಸಿ ಅಧ್ಯಕ್ಷರೂ ಆಗಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಮನೋಜ್ ಜೋಶಿ ಅವರು ಶಾಸ್ತ್ರಿ ಪಾರ್ಕ್ ಕಾರ್ಯಾಚರಣೆ ನಿಯಂತ್ರಣ ಕೇಂದ್ರದಿಂದ (ಒಸಿಸಿ) ಕೆಂಪು ಮಾರ್ಗದಲ್ಲಿ ಐ-ಎಟಿಎಸ್ ವ್ಯವಸ್ಥೆಗೆ ಚಾಲನೆ ನೀಡಿದರು. ಬಿಇಎಲ್‌ ಸಿಎಂಡಿ ಭಾನುಪ್ರಕಾಶ್ ಶ್ರೀವಾಸ್ತವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT