ಬುಧವಾರ, ಅಕ್ಟೋಬರ್ 21, 2020
24 °C

ದೆಹಲಿ: 173 ದಿನಗಳ ಬಳಿಕ ಮಜೆಂಟಾ ಲೈನ್ ಮೆಟ್ರೊ ಸಂಚಾರ ಪುನರಾರಂಭ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19ನಿಂದಾಗಿ ಐದು ತಿಂಗಳ ಕಾಲ ಸ್ಥಗಿತಗೊಂಡಿದ್ದ ದೆಹಲಿ ಮೆಟ್ರೊ ಸೇವೆ ಮಜೆಂಟಾ ಲೈನ್‌ನಲ್ಲಿ ಶುಕ್ರವಾರ ಪುನರಾರಂಭಗೊಂಡಿದೆ. 

‘ಪ್ರಯಾಣಿಕರು ಅಂತರ ಕಾಪಾಡಿಕೊಳ್ಳುವುದು ಮತ್ತು ಮಾಸ್ಕ್‌ ಧರಿಸುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಮುಖ್ಯ ಗುರಿಯಾಗಿದೆ. ಇದುವರೆಗೆ ಯಾವುದೇ ನಿಯಮ ಉಲ್ಲಂಘನೆ ಪ್ರಕರಣಗಳು ಕಂಡು ಬಂದಿಲ್ಲ’ ಎಂದು ಡಿಸಿಪಿ (ಮೆಟ್ರೊ) ಜಿತೇಂದ್ರ ಮಣಿ ಹೇಳಿದ್ದಾರೆ. 

ಕಳೆದ ಸೋಮವಾರದಿಂದ ಹಳದಿ ಮಾರ್ಗದಲ್ಲಿ ಈಗಾಗಲೇ ರೈಲು ಸಂಚಾರ ಆರಂಭಿಸಲಾಗಿದೆ. ‘ಕೋವಿಡ್‌ ಮಾರ್ಗಸೂಚಿ ಅನುಸಾರ ಪ್ರಯಾಣಿಕರ ಸುರಕ್ಷತೆಗೆ ಬೇಕಾದ ಎಲ್ಲಾ ನಿಯಮಗಳನ್ನು ಪಾಲಿಸಲಾಗುತ್ತಿದೆ’ ಎಂದು ದೆಹಲಿ ಮೆಟ್ರೊ ರೈಲು ಕಾರ್ಪೊರೆಷನ್‌ (ಡಿಎಂಆರ್‌ಸಿ) ತಿಳಿಸಿದೆ.

ಮೆಟ್ರೊ ರೈಲುಗಳು ಬೆಳಿಗ್ಗೆ 7-1 ಗಂಟೆ, ಸಂಜೆ 4–10 ಗಂಟೆಯವರೆಗೆ ಎರಡು ಹಂತಗಳಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಪ್ರಯಾಣಿಕರು ನಮ್ಮ ಸುರಕ್ಷತಾ ಮಾರ್ಗಸೂಚಿಗಳನ್ನು ಸಮರ್ಥವಾಗಿ ಅನುಸರಿಸುತ್ತಿದ್ದಾರೆ. ಇಂದು ನಾವು ಮುನ್ನೆಚ್ಚೆರಿಕಾ ಕ್ರಮಗಳನ್ನು ಕೈಗೊಂಡು ಮಜೆಂಟಾ ಲೈನ್‌ನಲ್ಲಿ ಯಶಸ್ವಿಯಾಗಿ ಕಾರ್ಯಾಚರಣೆ ಆರಂಭಿಸಿದ್ದೇವೆ’ ಎಂದು ಡಿಎಂಆರ್‌ಸಿ ಟ್ವೀಟ್‌ ಮಾಡಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು