ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಮೆಟ್ರೊ ಸೇವೆ ಪೂರ್ಣ ಪ್ರಮಾಣದಲ್ಲಿ ಪುನರಾರಂಭ

Last Updated 12 ಸೆಪ್ಟೆಂಬರ್ 2020, 6:43 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಏರ್‌ಪೋರ್ಟ್‌ ಏಕ್ಸ್‌ಪ್ರೆಸ್‌ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಶನಿವಾರ ಪುನರಾರಂಭವಾಗಿದೆ. ಈ ಮೂಲಕ170 ದಿನಗಳ ಬಳಿಕ ದೆಹಲಿ ಮೆಟ್ರೊ ಸೇವೆ ಪೂರ್ಣ ಪ್ರಮಾಣದಲ್ಲಿ ಆರಂಭವಾದಂತಾಗಿದೆ.

‘ಮೊದಲಿನಂತೆ ಬೆಳಿಗ್ಗೆ 6 ರಿಂದ ರಾತ್ರಿ 11ರ ವರೆಗೆ ಮೆಟ್ರೊ ಸೇವೆ ಇರಲಿದೆ. ಕೋವಿಡ್‌–19 ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಪ್ರಯಾಣಿಕರು ತಪ್ಪದೇ ಪಾಲಿಸಬೇಕು’ ಎಂದು ದೆಹಲಿ ಮೆಟ್ರೊ ರೇಲ್‌ ಕಾರ್ಪೊರೇಷನ್‌ (ಡಿಎಂಆರ್‌ಸಿ) ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT