ದೆಹಲಿ ಸಚಿವ ಸತ್ಯೇಂದ್ರ ಜೈನ್ ಆಸ್ಪತ್ರೆಗೆ ದಾಖಲು

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇಲ್ಲಿನ ಎಲ್ಎನ್ಜೆಪಿ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
57 ವರ್ಷದ ಜೈನ್ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಇದೇ ಮೇ 30ರಂದು ಬಂಧಿಸಿದೆ.
ಜೈನ್ ಅವರನ್ನು ತಿಹಾರ್ ಜೈಲಿನಿಂದ ಜಿ.ಬಿ ಪಂತ್ ಆಸ್ಪತ್ರೆಗೆ ಕರೆತರಲಾಯಿತು. ನಂತರ ಅವರನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.