ಹಣ ಅಕ್ರಮ ವರ್ಗಾವಣೆ: ದೆಹಲಿ ಸಚಿವ ಸತ್ಯೇಂದ್ರ ಜೈನ್‌ಗೆ ಜಾಮೀನು ನಿರಾಕರಣೆ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ.
ಸತ್ಯೇಂದ್ರ ಜೈನ್ ಹಾಗೂ ಅವರ ಪತ್ನಿ ಪೂನಂ ಜೈನ್ ಸೇರಿದಂತೆ ಇತರರ ವಿರುದ್ಧ, 2017ರಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಆಧಾರದ ಮೇಲೆ ಇ.ಡಿ ತನಿಖೆ ಆರಂಭಿಸಿತ್ತು.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಜೈನ್ ಅವರನ್ನು ಬಂಧಿಸಲಾಗಿತ್ತು. ದೆಹಲಿಯ ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ ಮತ್ತು ಜಲಸಂಪನ್ಮೂಲ ಸಚಿವರಾಗಿ ಜೈನ್ ಕಾರ್ಯ ನಿರ್ವಹಿಸುತ್ತಿದ್ದರು.
ಜೈನ್ ಮತ್ತು ಅವರ ಕುಟುಂಬದ ಒಡೆತನದ ಕಂಪೆನಿಗಳಿಗೆ ಸೇರಿದ ₹ 4.81 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಇ.ಡಿ ಮಾರ್ಚ್ 31ರಂದು ವಶಕ್ಕೆ ಪಡೆದಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.