ಶನಿವಾರ, ಮಾರ್ಚ್ 25, 2023
29 °C

ಮತ್ತೊಂದು ವಿಡಿಯೊ: ಜೈಲಿನಲ್ಲಿ 8 ಕೆಜಿ ತೂಕ ಹೆಚ್ಚಿಸಿಕೊಂಡ ಸತ್ಯೇಂದ್ರ ಜೈನ್‌!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡ ಸತ್ಯೆಂದ್ರ ಜೈನ್‌ ಅವರ ಮತ್ತೊಂದು ಸಿಸಿಟಿವಿ ವಿಡಿಯೊ ತುಣುಕು ಬಹಿರಂಗವಾಗಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಅವರು ಹೊರಗಿನಿಂದ ಊಟ ತರಿಸಿಕೊಂಡು ತಿನ್ನುತ್ತಿರುವುದು ವಿಡಿಯೊದಲ್ಲಿದೆ.

ಇತ್ತೀಚೆಗೆ ಜೈಲಿನಲ್ಲಿ ತಮ್ಮ ಪಾದಗಳಿಗೆ ಮಸಾಜ್‌ ಮಾಡಿಸಿಕೊಳ್ಳುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿತ್ತು. ಜೈನ್‌ ಅವರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಸಿಗುತ್ತಿರುವ ವಿಚಾರವಾಗಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ.

ಜೈನ್‌ ಅವರು ಜೈಲಿನಲ್ಲಿ ಇದ್ದುಕೊಂಡು 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ ಎಂದು ಎಎನ್‌ಐ ವರದಿ ಮಾಡಿದೆ. ಜೈನ್‌ ಅವರು 28 ಕೆಜಿ ತೂಕ ಕಳೆದುಕೊಂಡಿರುವುದಾಗಿ ಅವರ ವಕೀಲರು ವಾದಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು