ನವದೆಹಲಿ: ಕೆಲ ದಿನಗಳ ಹಿಂದೆ ದಕ್ಷಿಣ ದೆಹಲಿಯಿಂದ ಕಾಣೆಯಾಗಿದ್ದ 13 ವರ್ಷದ ಬಾಲಕಿಯನ್ನು ಸಾಕೇತ್ ಮೆಟ್ರೊ ನಿಲ್ದಾಣದ ಬಳಿ ರಕ್ಷಿಸಲಾಗಿದೆ.

ವಿಚಾರಣೆ ವೇಳೆ ಬಾಲಕಿಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಬಳಿಕ, ಆರೋಪಿಗಳು ಆಕೆಯನ್ನು ಟಿಕ್ರಿ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.

ಪ್ರಕರಣ ಸಂಬಂಧ ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಮೋಹಿತ್ (20), ಆಕಾಶ್ (19), ಶಾರೂಖ್ (20) ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಏಪ್ರಿಲ್ 24ರ ಸಂಜೆ 5 ಗಂಟೆಗೆ ಮನೆಯಿಂದ ತೆರಳಿದ್ದ ಬಾಲಕಿವಾಪಸ್ ಆಗಿರಲಿಲ್ಲ. ಸ್ನೇಹಿತರು ಅಥವಾ ಸಂಬಂಧಿಕರ ಮನೆಗೆ ತೆರಳಿರಬಹುದೆಂದು ಪೋಷಕರು ಭಾವಿಸಿದ್ದರು. ರಾತ್ರಿಯಾದರೂ ಮಗಳು ಬಾರದಿದ್ದರಿಂದ ಭಯಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮೇ 1ರಂದು ದಕ್ಷಿಣ ದೆಹಲಿಯಲ್ಲಿ ಬಾಲಕಿಯನ್ನು ಕರೆದೊಯ್ದಿದ್ದ ಆರೋಪಿ ಬಗ್ಗೆ ಮಾಹಿತಿದಾರರಿಂದ ಮಾಹಿತಿ ಸಿಕ್ಕಿತ್ತು. ಬಳಿಕ ಆತನನ್ನು ಬಂಧಿಸಿದ ಪೊಲೀಸರು ಆತ ನೀಡಿದ ಮಾಹಿತಿ ಮೇರೆಗೆ ಉಳಿದ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ಅತ್ಯಾಚಾರ ನಡೆಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಡಿಸಿಪಿ ಬೆನಿತಾ ಮೇರಿ ಜೈಕರ್ ತಿಳಿಸಿದ್ದಾರೆ.

ಮರುದಿನ, ಪೋಸ್ಟರ್ನಲ್ಲಿರುವ ಕಾಣೆಯಾಗಿರುವ ಬಾಲಕಿಯನ್ನು ಸಾಕೆತ್ ಮೆಟ್ರೋ ನಿಲ್ದಾಣದ ಬಳಿ ನೋಡಿದ್ದಾಗಿ ಮಹಿಳೆಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲಿಸರು ಸ್ಥಳಕ್ಕೆ ಹೋದಾಗ ಬಾಲಕಿ ಮತ್ತಿನಲ್ಲಿದ್ದಳು. ಆರೋಪಿಗಳು ಮತ್ತಿನ ಔಷಧವನ್ನು ಆಕೆಗೆ ತಿನ್ನಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಬಳಿಕ, ಏಮ್ಸ್ ಆಸ್ಪತ್ರೆಗೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ..ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾದಲ್ಲಿ 'ಅಭಿಷೇಕ'ಕ್ಕೆ ಅನುಮತಿ ಕೋರಿ ಅರ್ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.