ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕೊರೊನಾ ವಿರುದ್ಧ ಹೋರಾಡಿ ಜಯ ಸಾಧಿಸಿದ ಒಂದು ತಿಂಗಳ ಮಗು

Last Updated 15 ಜನವರಿ 2022, 11:22 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಆಸ್ಪತ್ರೆಯಲ್ಲಿ ಒಂದು ತಿಂಗಳ ಮಗುವೊಂದು ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದೆ.

ಕಿವಿಗೆ ಚಿಕಿತ್ಸೆ ಪಡೆಯಲು ಮೂಲಚಂದ್ ಆಸ್ಪತ್ರೆಗೆ ಬಂದಿದ್ದ ಮಗುವಿಗೆ ಕೋವಿಡ್‌ ಸೋಂಕು ಇರುವುದು ಪತ್ತೆಯಾಗಿತ್ತು. ಆ ಹಿನ್ನೆಲೆಯಲ್ಲಿ ಮಗುವನ್ನು ಆಸ್ಪತ್ರೆಯಲ್ಲಿಯೇ ಇರಿಸಿಕೊಂಡು ಚಿಕಿತ್ಸೆ ನೀಡಲಾಯಿತು. ಈಗ ಸಂಪೂರ್ಣ ಚೇತರಿಕೆಯೊಂದಿಗೆ ಮಗುವನ್ನು ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಈ ಕುರಿತು ವಿಡಿಯೊ ಟ್ವೀಟ್‌ ಮಾಡಿರುವ ಆಸ್ಪತ್ರೆಯು, ‘ಕಿವಿಯ ಚಿಕಿತ್ಸೆಗಾಗಿ ಒಂದು ತಿಂಗಳ ಮಗುವನ್ನು ಇಲ್ಲಿಗೆ ಕರೆತರಲಾಗಿತ್ತು. ಕೋವಿಡ್‌ ಪರೀಕ್ಷೆ ನಡೆಸಿದ ನಂತರ ಮಗುವಿಗೆ ಸೋಂಕು ಇರುವುದು ಪತ್ತೆಯಾಗಿತು. ಪೂರ್ಣ ಚೇತರಿಕೆಯೊಂದಿಗೆ ಮಗುವನ್ನು ಬಿಡುಗಡೆ ಮಾಡಲಾಗುತ್ತಿದೆ. ಕೋವಿಡ್‌ನ ಪ್ರತ್ಯೇಕ ಘಟಕದಲ್ಲಿದ್ದ ಮಗುವಿನ ಬಗ್ಗೆ ಸಿಬ್ಬಂದಿಯು ಹೆಚ್ಚು ಕಾಳಜಿ ವಹಿಸಿದ್ದಾರೆ’ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT