ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಸಿಜನ್‌ ಕೊರತೆ ಸೃಷ್ಟಿಸಿದ ಆರೋಪ: ಕೇಜ್ರಿವಾಲ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

Last Updated 28 ಜೂನ್ 2021, 9:08 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ರಾಜೀನಾಮೆ ಆಗ್ರಹಿಸಿ ದೆಹಲಿಯ ಬಿಜೆಪಿ ನಾಯಕರು ಜಂತರ್‌ ಮಂತರ್‌ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಅರವಿಂದ್ ಕೇಜ್ರಿವಾಲ್‌ ನೇತೃತ್ವದ ಸರ್ಕಾರವು ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ಆಮ್ಲಜನಕದ ಉಬ್ಬರ ಸೃಷ್ಟಿಸಿದೆ’ ಎಂದು ಪ್ರತಿಭಟನಕಾರರು ದೂರಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು, ಕಾರ್ಯಕರ್ತರು ಭಾಗವಹಿಸಿದ್ದು, ದೆಹಲಿಯ ಬಿಜೆಪಿ ಘಟಕದ ಅಧ್ಯಕ್ಷ ಆದೇಶ್‌ ಗುಪ್ತಾ ನೇತೃತ್ವ ವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು, ದೆಹಲಿ ಸರ್ಕಾರವು ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು, ನಾಲ್ಕು ಪಟ್ಟು ಹೆಚ್ಚು ಆಮ್ಲಜನಕ ಬೇಡಿಕೆಯನ್ನು ಇಟ್ಟಿತ್ತು ಎಂದು ಸುಪ್ರೀಂಕೋರ್ಟ್‌ನ ಸಮಿತಿಯೊಂದರ ಮಧ್ಯಂತರ ವರದಿ ಹೇಳಿದೆ. ಈ ನಡೆಯಿಂದಾಗಿ ಹಲವು ರಾಜ್ಯಗಳಲ್ಲಿ ಆಮ್ಲಜನಕ ಕೊರತೆ ಉಂಟಾಗಿತ್ತು. ಇದಕ್ಕೆ ಅರವಿಂದ್‌ ಕೇಜ್ರಿವಾಲ್‌ ಅವರೇ ನೇರ ಹೊಣೆ. ಅವರು ತಕ್ಷಣವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು. ಅಲ್ಲದೆ ಅವರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.

‘ಕೋವಿಡ್‌ ಸಾಂಕ್ರಾಮಿಕದ ನಿರ್ವಹಣೆಯಲ್ಲಿ ತನ್ನ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಕೇಜ್ರಿವಾಲ್‌ ಸರ್ಕಾರವು ಆಮ್ಲಜನಕ ಕೊರತೆಯನ್ನು ಸೃಷ್ಟಿಸಿತು’ ಎಂದು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಆರೋಪಿಸಿದ್ಧಾರೆ.

‘ಸಮಿತಿಯ ವರದಿಯನ್ನು ಬಳಸಿಕೊಂಡು ದೆಹಲಿ ಸರ್ಕಾರವನ್ನು ದೂಷಿಸಲುಬಿಜೆಪಿ ಯತ್ನಿಸುತ್ತಿದೆ’ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಟೀಕಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT