ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನ ಮೇಲೆ ನಿಂತು ಬರ್ತ್‌ಡೇ ಪಾರ್ಟಿ: ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ ಬಂಧನ

Last Updated 17 ಮಾರ್ಚ್ 2023, 5:07 IST
ಅಕ್ಷರ ಗಾತ್ರ

ನವದೆಹಲಿ: ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

2022ರ ನವೆಂಬರ್ 16ರಂದು ತನ್ನ ಹುಟ್ಟುಹಬ್ಬದಂದು ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಚಲಿಸುವ ಕಾರಿನ ಮೇಲೆ ನಿಂತುಕೊಂಡು ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಬಳಿಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿ, ಗೂಂಡಾಗಿರಿ ಪ್ರದರ್ಶಿಸಿದ ಕಾರಣಕ್ಕಾಗಿ ದೀಕ್ಷಿತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ದೆಹಲಿ ಪೊಲೀಸರು ದೀಕ್ಷಿತ್‌ನನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಉಳಿದಂತೆ ದೀಕ್ಷಿತ್‌ ಸ್ನೇಹಿತರಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಯೂಟ್ಯೂಬರ್‌ ತನ್ನ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT