ಗುರುವಾರ , ಅಕ್ಟೋಬರ್ 29, 2020
19 °C

ಕೋವಿಡ್-19: ದೆಹಲಿಯಲ್ಲಿ ಸೆ. 30ರವರೆಗೆ ಪ್ರತಿಭಟನೆಗೆ ನಿರ್ಬಂಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್-19 ಪರಿಸ್ಥಿತಿಯಿಂದಾಗಿ ರಾಜಧಾನಿಯಲ್ಲಿ ಸೆಪ್ಟೆಂಬರ್ 30ರವರೆಗೆ ಯಾವುದೇ ರೀತಿಯ ಪ್ರತಿಭಟನೆಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಆದೇಶವನ್ನು ಉಲ್ಲೇಖಿಸಿ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ನಡುವೆಯೂ ಪೊಲೀಸರು ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿದ್ದು, ಪ್ರತಿಭಟನೆಗೆ ನಿರ್ಬಂಧ ಹೇರಿರುವ ಮಾಹಿತಿ ನೀಡಿದ್ದಾರೆ. ಆದೇಶದ ಪ್ರಕಾರ, ರಾಜಕೀಯ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಗಳಿಗೆ ಗುಂಪುಗೂಡಲು ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ದೆಹಲಿ ಕಾಂಗ್ರೆಸ್ ಮುಖಡರು ಸೋಮವಾರ ಕೃಷಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಜಾಥಾ ನಡೆಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು