ಭಾನುವಾರ, ಅಕ್ಟೋಬರ್ 25, 2020
22 °C

ಟ್ರ್ಯಾಕ್ಟರ್‌ಗೆ ಬೆಂಕಿ: ಪಂಜಾಬ್‌ ಯುವ ಕಾಂಗ್ರೆಸ್‌ ಅಧ್ಯಕ್ಷ ಪೊಲೀಸರ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ಬಂದ್‌ ಪ್ರತಿಭಟನೆ ವೇಳೆ, ದೆಹಲಿಯ ಇಂಡಿಯಾ ಗೇಟ್ ಬಳಿ ಸೋಮವಾರ ಟ್ರ್ಯಾಕ್ಟರ್ ಸುಟ್ಟ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪಂಜಾಬ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಬ್ರಿಂದರ್ ಧಿಲ್ಲೋನ್ ಎಂಬುವವರನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ದೇಶದ ವಿಪಕ್ಷಗಳು ಸೋಮವಾರ ಕರೆ ನೀಡಲಾಗಿದ್ದ ಭಾರತ ಬಂದ್‌ ಪ್ರತಿಭಟನೆ ವೇಳೆ ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಸೋಮವಾರ ರಾಷ್ಟ್ರಪತಿ ಭವನ ಮತ್ತು ಸಂಸತ್ತಿನಿಂದ ಕೆಲವೇ ಮೀಟರ್ ದೂರದಲ್ಲಿರುವ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್‌ಗೆ ಬೆಂಕಿ ಇಟ್ಟಿದ್ದರು. ಘಟನೆ ಸಂಬಂಧ ಟೀಕೆಗಳು ಕೇಳಿ ಬಂದಿವೆ.

ಈ ಘಟನೆಯಲ್ಲಿ ಪಂಜಾಬ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಬ್ರಿಂದರ್ ಧಿಲ್ಲೋನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಪಂಜಾಬ್‌ ಯುವ ಕಾಂಗ್ರೆಸ್‌ನ ಆರು ಮಂದಿಯನ್ನು ಪೊಲೀಸರು ಸೋಮವಾರವೇ ಬಂಧಿಸಿದ್ದರು. ಅಲ್ಲದೆ, ಎರಡು ವಾಹನಗಳನ್ನು ಸಹ ವಶಪಡಿಸಿಕೊಂಡಿದ್ದರು.

ರಾಜ್‌ಪಾತ್‌ನ ಮಾನ್ ಸಿಂಗ್ ಕ್ರಾಸಿಂಗ್‌ಗೆ ಟ್ರ್ಯಾಕ್ಟರ್‌ ಅನ್ನು ಟ್ರಕ್‌ನಲ್ಲಿ ಸಾಗಿಸಿ ತಂದಿದ್ದ 20 ಮಂದಿ ಪಂಜಾಬ್‌ ಯುವ ಕಾಂಗ್ರೆಸ್‌ ಘಟಕದ ಕಾರ್ಯಕರ್ತರು ಅದಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನ ಯುವ ಕಾಂಗ್ರೆಸ್ ಕಾರ್ಯಕರ್ತರು ಪಂಜಾಬ್ ಪೊಲೀಸರ ಕಾರಿನಲ್ಲಿ ದೆಹಲಿಗೆ ಬಂದಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು