ಮಂಗಳವಾರ, ಮಾರ್ಚ್ 2, 2021
21 °C

ಟ್ರ್ಯಾಕ್ಟರ್ ಪರೇಡ್‌ಗೆ ಪೊಲೀಸರ ಅನುಮತಿ: ರೈತ ಮುಖಂಡ ಹೇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Farmers protest

ನವದೆಹಲಿ: ಇದೇ 26ರಂದು, ಗಣರಾಜ್ಯೋತ್ಸವದ ದಿನ ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ಪರೇಡ್‌ಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ರೈತ ನಾಯಕ ಅಭಿಮನ್ಯು ಕೋಹರ್ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರ ಸಂಘಟನೆಗಳು ಪೊಲೀಸರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ, ‘ಜ. 26ರಂದು ರೈತರು ‘ಕಿಸಾನ್ ಗಣತಂತ್ರ ಪರೇಡ್’ ನಡೆಸಲಿದ್ದಾರೆ. ಬ್ಯಾರಿಕೇಡ್‌ಗಳನ್ನು ತೆರೆಯಲಾಗುತ್ತಿದ್ದು ನಾವು ದೆಹಲಿ ಪ್ರವೇಶಿಸಲಿದ್ದೇವೆ. ನಾವು (ರೈತರು ಮತ್ತು ದೆಹಲಿ ಪೊಲೀಸರು) ಒಪ್ಪಂದಕ್ಕೆ ಬಂದಿದ್ದು, ಪರೇಡ್ ಮಾರ್ಗದ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಅಂತಿಮ ರೂಪುರೇಷೆ ನಾಳೆಯೊಳಗೆ ಸಿದ್ಧವಾಗಲಿದೆ’ ಎಂದು ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು