ಆಲ್ಟ್ ನ್ಯೂಸ್‌ನ ಜುಬೇರ್ ಇಂದು ಬೆಂಗಳೂರಿಗೆ- ಸಾಧ್ಯತೆ

ನವದೆಹಲಿ: ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಫ್ಯಾಕ್ಟ್ ಚೆಕಿಂಗ್ ವೆಬ್‌ಸೈಟ್ 'ಆಲ್ಟ್ ನ್ಯೂಸ್' ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ವಿಚಾರಣೆ ತೀವ್ರಗೊಂಡಿದೆ.
ಕಳೆದ ಮೂರು ತಿಂಗಳಿಂದ ಜುಬೇರ್‌ಗೆ ಸಂಬಂಧಿಸಿದ ಸಾಕ್ಷ್ಯ ಕಲೆ ಹಾಕಿರುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.
Delhi Police have evidence that in the last three months, Alt News co-founder Mohd. Zubair had received Rs 50 lakhs in his bank account. Police are investigating the source of the funding received & might take him to Bengaluru tomorrow: Delhi Police
— ANI (@ANI) June 28, 2022
ಜುಬೇರ್ ಬ್ಯಾಂಕ್ ಖಾತೆಗೆ ₹ 50 ಲಕ್ಷ ಫಂಡ್ ಬಂದಿದ್ದು, ಹಣದ ಮೂಲ ಕುರಿತಂತೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಈ ಸಂಬಂಧ ಇಂದು(ಬುಧವಾರ) ಜುಬೇರ್ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜುಬೇರ್ ವಿರುದ್ಧ ಐಪಿಸಿ ಸೆಕ್ಷನ್ 153ಎ (ಧಾರ್ಮಿಕ, ಜನಾಂಗೀಯ, ಹುಟ್ಟಿದ ಸ್ಥಳ, ಭಾಷೆಯ ಹಿನ್ನೆಯಲ್ಲಿ ಭಿನ್ನ ಗುಂಪುಗಳ ನಡುವೆ ದ್ವೇಷವನ್ನು ಹರಡುವುದು) ಹಾಗೂ 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯ) ಅಡಿಯಲ್ಲಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಜುಬೇರ್ ಅವರನ್ನು ನಿನ್ನೆ ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ, ದೆಹಲಿಯ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧ ಸರ್ವಾರಿಯಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ಬಳಿಕ, ಜುಬೇರ್ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಇದನ್ನೂ ಓದಿ..ಧಾರ್ಮಿಕ ಭಾವನೆಗೆ ಧಕ್ಕೆ: ಪತ್ರಕರ್ತ ಜುಬೇರ್ ಪೊಲೀಸ್ ಕಸ್ಟಡಿ 4 ದಿನ ವಿಸ್ತರಣೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.