ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಜಾಮೀನು: ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಈಶಾನ್ಯ ದೆಹಲಿಯಲ್ಲಿ ಗಲಭೆ
Last Updated 16 ಜೂನ್ 2021, 16:36 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಈಶಾನ್ಯ ದೆಹಲಿಯಲ್ಲಿ ಕಳೆದ ವರ್ಷ ನಡೆದಿದ್ದ ಗಲಭೆ ಪ್ರಕರಣಗಳಲ್ಲಿ ಮೂವರು ವಿದ್ಯಾರ್ಥಿಗಳಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್‌ನ ಮೂರು ಪ್ರತ್ಯೇಕ ತೀರ್ಪುಗಳನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಜೆಎನ್‌ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್‌, ದೇವಾಂಗನಾ ಕಾಲಿತಾ ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ಆಸಿಫ್‌ ಇಕ್ಬಾಲ್‌ ತನ್ಹಾ ಅವರಿಗೆ ಹೈಕೋರ್ಟ್‌ ಮಂಗಳವಾರವಷ್ಟೇ ಜಾಮೀನು ಮಂಜೂರು ಮಾಡಿತ್ತು.

‌‘ಭಯೋತ್ಪಾದಕ ಕಾನೂನುಗಳನ್ನು ವಿವೇಚನೆಯಿಲ್ಲದೆ ಬಳಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹೈಕೋರ್ಟ್‌, ಪ್ರತಿಭಟಿಸುವ ಹಕ್ಕು ಮತ್ತು ಭಯೋತ್ಪಾದನೆಯ ನಡುವಣ ರೇಖೆಯನ್ನು ಸರ್ಕಾರ ಮುಸುಕಾಗಿಸಿದೆ. ಈ ಮನಸ್ಥಿತಿಯೇ ಗಟ್ಟಿಗೊಂಡರೆ ಅದು ಪ್ರಜಾಪ್ರಭುತ್ವಕ್ಕೆ ವಿಷಾದದ ದಿನ ಎಂದು ಹೇಳದೆ ವಿಧಿಯಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT