ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಿ ವೈರ್‌’ನ ಸಿದ್ಧಾರ್ಥ್‌ ವರದರಾಜನ್‌, ವೇಣು ಮನೆಗಳಲ್ಲಿ ಪೊಲೀಸರ ಪರಿಶೀಲನೆ

Last Updated 31 ಅಕ್ಟೋಬರ್ 2022, 14:11 IST
ಅಕ್ಷರ ಗಾತ್ರ

ನವದೆಹಲಿ: ಸುದ್ದಿ ಮಾಧ್ಯಮ ‘ದಿ ವೈರ್’ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್, ಎಂ.ಕೆ ವೇಣು ಮತ್ತು ಜಾಹ್ನವಿ ಸೇನ್ ಅವರ ಮನೆಗಳಲ್ಲಿ ದೆಹಲಿ ಪೊಲೀಸರು ಸೋಮವಾರ ಶೋಧ ನಡೆಸಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ‘ದಿ ವೈರ್‌’ ವಿರುದ್ಧ ಸಲ್ಲಿಸಿದ ದೂರಿನ ಆಧಾರದ ಮೇಲೆ ವಂಚನೆ, ಫೋರ್ಜರಿ, ಮಾನನಷ್ಟ ಮತ್ತು ಕ್ರಿಮಿನಲ್ ಪಿತೂರಿ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ಕೈಗೊಂಡಿದ್ದಾರೆ ಎನ್ನಲಾಗಿದೆ.

‘ಪೊಲೀಸರು ಸಂಜೆ 4.40 ರ ಸುಮಾರಿಗೆ ಬಂದು 6 ಗಂಟೆಗೆ ಹೋದರು. ಅಮಿತ್ ಮಾಳವಿಯಾ ಸಲ್ಲಿಸಿರುವ ದೂರಿನ ಸಂಬಂಧ ದಾಖಲಾಗಿರುವ ಎಫ್‌ಐಆರ್‌ ಹಿನ್ನೆಲೆಯಲ್ಲಿ, ದೆಹಲಿಯ ಅಪರಾಧ ವಿಭಾಗದ ಪೊಲೀಸರ ಪರವಾಗಿ ಇಲ್ಲಿಗೆ ಬಂದಿರುವುದಾಗಿ ಅವರು ಹೇಳಿದರು. ಮಾಹಿತಿಯನ್ನು ಕಾಪಿ ಮಾಡಿಕೊಳ್ಳಲು ಅವರು ನನ್ನ ಐಫೋನ್ ಮತ್ತು ಐಪ್ಯಾಡ್ ಅನ್ನು ತೆಗೆದುಕೊಂಡು ಹೋದರು. ವರದರಾಜನ್ ಅವರ ಮನೆಯ ಮೇಲೂ ದಾಳಿ ನಡೆಯುತ್ತಿದೆ’ ಎಂದು ಎಂಕೆ ವೇಣು ಅವರ ಹೇಳಿಕೆ ಉಲ್ಲೇಖಿಸಿ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT