ಗುರುವಾರ , ಮಾರ್ಚ್ 4, 2021
25 °C

ಗಣರಾಜ್ಯೋತ್ಸವ ಹಿಂಸಾಚಾರ: 200 ಮಂದಿ ಭಾವಚಿತ್ರ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 200 ಮಂದಿಯ ಭಾವಚಿತ್ರಗಳನ್ನು ದೆಹಲಿ ಪೊಲೀಸರು ಶುಕ್ರವಾರ ಬಿಡುಗಡೆ ಮಾಡಿದ್ದಾರೆ.

ದೆಹಲಿಯಲ್ಲಿ ಜನವರಿ 26ರಂದು ನಡೆದ ಟ್ರ್ಯಾಕ್ಟರ್‌ ರ‍್ಯಾಲಿಗೆ ಸಂಬಂಧಿಸಿದಂತೆ ಎಲ್ಲ ವಿಡಿಯೊಗಳು ಮತ್ತು ಚಿತ್ರಗಳನ್ನು ಪರಿಶೀಲಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಭಾವಚಿತ್ರದಲ್ಲಿ ಇರುವವರನ್ನು ಗುರುತಿಸುವ ಕಾರ್ಯ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಿದ ಟ್ರ್ಯಾಕ್ಟರ್‌ ಪರೇಡ್‌ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆದಿತ್ತು. ಹಲವರು ಕೆಂಪುಕೋಟೆ ಪ್ರವೇಶಿಸಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು