ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಪಟಾಕಿ ಮಾರಾಟ; 10 ಮಂದಿ ಬಂಧನ

Last Updated 11 ನವೆಂಬರ್ 2020, 15:00 IST
ಅಕ್ಷರ ಗಾತ್ರ

ನವದೆಹಲಿ: ನಗರದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದೆಹಲಿ ಪೊಲೀಸರು ಬುಧವಾರ 10 ಮಂದಿಯನ್ನು ಬಂಧಿಸಿದ್ದು, 12 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಲಿನ್ಯ ಮತ್ತು ಕೊರೊನಾ ಸೋಂಕು ಹರಡುವಿಕೆ ತಡೆಯುವ ಉದ್ದೇಶದಿಂದ ದೆಹಲಿ ಸರ್ಕಾರ ನ.7ರಿಂದ 30 ರವರೆಗೆ ಹಸಿರು ಪಟಾಕಿ ಸೇರಿದಂತೆ ಎಲ್ಲ ರೀತಿಯ ಪಟಾಕಿಗಳ ನಿಷೇಧಿಸಿ ಆದೇಶ ಹೊರಡಿಸಿತ್ತು.

ಪಟಾಕಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಪ್ರಕರಣಗಳನ್ನು ದಾಖಲಿಸಲಾಗಿದೆ. 10 ಮಂದಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಆಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ಅನಿಲ್‌ ಮಿತ್ತಲ್ ತಿಳಿಸಿದ್ದಾರೆ.

ಇದುವರೆಗೆ ಪಟಾಕಿ ಮಾರಾಟ ಮಾಡಿದ ಆರೋಪದಡಿ 29 ಪ್ರಕರಣಗಳನ್ನು ದಾಖಲಿಸಲಾಗಿದ್ದು, 30 ಜನರನ್ನು ಬಂಧಿಸಲಾಗಿದೆ. ಜೊತೆಗೆ, ಅವರ ಬಳಿಯಿಂದ ಒಟ್ಟು 2,792.77 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪಟಾಕಿ ಸಿಡಿಸಿದ ಆರೋಪದಲ್ಲಿ ಹತ್ತು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT