ಬುಧವಾರ, ಸೆಪ್ಟೆಂಬರ್ 29, 2021
21 °C

ದೆಹಲಿ: ಪಾಕ್‌ನಲ್ಲಿ ತರಬೇತಿ ಪಡೆದಿರುವ ಇಬ್ಬರು ಉಗ್ರರ ಬಂಧನ, ಸ್ಫೋಟಕಗಳು ವಶ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಭಯೋತ್ಪಾದನೆ–ಪ್ರಾತಿನಿಧಿಕ ಚಿತ್ರ

ನವದೆಹಲಿ: ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಇಬ್ಬರು ಉಗ್ರರನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸ್‌ ವಿಶೇಷ ಘಟಕದ ಡಿಸಿಪಿ ಪ್ರಮೋದ್‌ ಕುಷ್ವಾಹಾ ತಿಳಿಸಿದರು.

ಪಾಕಿಸ್ತಾನ ನಿಯಂತ್ರಿತ ಉಗ್ರ ಸಂಘಟನೆಯ ಜಾಲವನ್ನು ಭೇದಿಸಲಾಗಿದೆ. ಪಾಕಿಸ್ತಾನದಲ್ಲಿ ತರಬೇತಿ ಪಡೆದಿರುವ ಇಬ್ಬರು ಉಗ್ರರು ಸೇರಿ ಒಟ್ಟು ಆರು ಜನರನ್ನು ಬಂಧಿಸಲಾಗಿದೆ. ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಸ್ಫೋಟಕಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಪ್ರಮೋದ್ ಮಾಹಿತಿ ನೀಡಿದರು. 

ಶಂಕಿತರು ದೇಶದಾದ್ಯಂತ ಸ್ಫೋಟಗಳನ್ನು ನಡೆಸಲು ಹಾಗೂ ಕೆಲವು ವ್ಯಕ್ತಿಗಳನ್ನು ಗುರಿ ಮಾಡಿ ಹತ್ಯೆ ನಡೆಸಲು ಯೋಜನೆ ರೂಪಿಸಿದ್ದರು ಎಂದು ಹೇಳಿದರು. 

'ಕೋಟಾದಿಂದ ಒಬ್ಬ, ದೆಹಲಿಯಿಂದ ಇಬ್ಬರು ಹಾಗೂ ಉತ್ತರ ಪ್ರದೇಶದಿಂದ ಮೂವರನ್ನು ಬಂಧಿಸಲಾಗಿದೆ. ಆರು ಜನರ ಪೈಕಿ ಇಬ್ಬರು ಮಸ್ಕತ್‌ ಮೂಲಕ ಪಾಕಿಸ್ತಾನ ಪ್ರವೇಶಿಸಿದ್ದರು. ಅಲ್ಲಿ ಅವರಿಗೆ ಸ್ಫೋಟಕಗಳು, ಎಕೆ–47 ಸೇರಿದಂತೆ ಶಸ್ತ್ರಾಸ್ತ್ರಗಳ ಬಳಕೆಯ ಕುರಿತು 15 ದಿನಗಳ ತರಬೇತಿ ನೀಡಲಾಗಿತ್ತು' ಎಂದು ದೆಹಲಿ ಪೊಲೀಸ್‌ ವಿಶೇಷ ಘಟಕ ತಿಳಿಸಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು