ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಪಟಾಕಿ ಮಾರಾಟ ಮಳಿಗೆಗಳ ತಾತ್ಕಾಲಿಕ ಪರವಾನಗಿ ರದ್ದು

Last Updated 9 ನವೆಂಬರ್ 2020, 3:44 IST
ಅಕ್ಷರ ಗಾತ್ರ
ADVERTISEMENT
""

ನವದೆಹಲಿ: ಈ ವರ್ಷ ದೀಪಾವಳಿ ವೇಳೆ ಪಟಾಕಿ ಮಾರಾಟಕ್ಕೆ ನೀಡಲಾಗಿದ್ದ ಎಲ್ಲಾ ತಾತ್ಕಾಲಿಕ ಪರವಾನಗಿಗಳನ್ನು ರದ್ದುಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ದೆಹಲಿ ಪೊಲೀಸರು ಭಾನುವಾರ ನಿರ್ದೇಶನ ನೀಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ವಾಯುಮಾಲಿನ್ಯದಿಂದಾಗಿ ಕೋವಿಡ್ -19 ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ಪರಿಗಣಿಸಿ ಈ ಬಾರಿ ಪಟಾಕಿ ಮಾರಾಟ ಮತ್ತು ಬಳಕೆಗೆ ದೆಹಲಿ ಸರ್ಕಾರ ನಿಷೇಧ ಏರಿದೆ. ಈ ಹಿನ್ನಲೆಯಲ್ಲಿ ನಿರ್ದೇಶನ ನೀಡಲಾಗಿದೆ.

‘ದಿನಾಂಕ 06.11.2020ರಂದು ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ನೀಡಿರುವ ನಿರ್ದೇಶದಂತೆ ಎಲ್ಲ ರೀತಿಯ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು’ ಎಂದುಸುತ್ತೋಲೆ ಹೊರಡಿಸಲಾಗಿದೆ.ಈ ಕ್ರಮವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಭಾನುವಾರ ಅಕ್ರಮವಾಗಿ ಪಟಾಕಿ ಮಾರಾಟ ಮಾಡಿದ ಆರೋಪದಡಿಯಲ್ಲಿ 7 ಜನರನ್ನು ಬಂಧಿಸಲಾಗಿದ್ದು, ಸುಮಾರು 600 ಕೆಜಿಯಷ್ಟು ಪಟಾಕಿಯನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಅನಿಲ್‌ ಮಿತ್ತಲ್‌ ಅವರು, ‘ಕ್ರಮ ಉಲ್ಲಂಘಿಸಿ ಪಟಾಕಿ ಮಾರಾಟ ಮಾಡಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ.ಒಟ್ಟು 593.224 ಕೆಜಿಯಷ್ಟು ಪಟಾಕಿಯನ್ನು ವಶಕ್ಕೆ ಪಡೆಯಲಾಗಿದೆ. ಪಟಾಕಿ ಸಿಡಿಸಿದ ಆರೋಪದಡಿ 8 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಒಬ್ಬನನ್ನು ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಮತ್ತು ಕೊರೊನಾವೈರಸ್ ಪ್ರಕರಣಗಳ ಹಠಾತ್ ಹೆಚ್ಚಳವನ್ನು ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸರ್ಕಾರಕ್ಕೆ ಸಲಹೆ ನೀಡಿತ್ತು. ಅದರಂತೆ ದೆಹಲಿ ಸರ್ಕಾರವು, ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವುದೂ ಸೇರಿ ಹಲವು ಕ್ರಮಗಳನ್ನು ಘೋಷಿಸಿತ್ತು.

‘ಈ ವರ್ಷ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ಪರವಾನಗಿ ಸಲುವಾಗಿ 260 ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯು ನಿಗದಿಪಡಿಸಿರುವ ಮಾನದಂಡಗಳ ಅನುಸಾರವಾಗಿ ಕೇವಲ 138 ಅಂಗಡಿಗಳಿಗೆ ಪರವಾನಗಿ ನೀಡಲಾಗಿತ್ತು’ ಎಂದು ಜಂಟಿ ಪೊಲೀಸ್ ಆಯುಕ್ತ (ಪರವಾನಗಿ ಘಟಕ) ಸುವಶಿಸ್ ಚೌಧರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT