ಬುಧವಾರ, ಅಕ್ಟೋಬರ್ 21, 2020
26 °C

ರಾಮ್‌ ವಿಲಾಸ್‌ ಪಾಸ್ವಾನ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು.

ದೆಹಲಿಯಲ್ಲಿರುವ ರಾಮ್‌ ವಿಲಾಸ್‌ ಪಾಸ್ವಾನ್‌ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು.

ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು ಪಾಸ್ವಾನ್‌ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.

ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌(74) ಗುರುವಾರ ನಿಧನರಾದರು.

ಸುಮಾರು 50 ವರ್ಷಗಳ ರಾಜಕೀಯ ಜೀವನದಲ್ಲಿ ರಾಮ್‌ ವಿಲಾಸ್ ಪಾಸ್ವಾನ್‌ ಅವರು ದೇಶದ ಪ್ರಮುಖ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು