ಮಂಗಳವಾರ, ಸೆಪ್ಟೆಂಬರ್ 22, 2020
24 °C

ದೆಹಲಿಯಲ್ಲಿ ಭಾರಿ ಮಳೆ: ಹಲವು ಪ್ರದೇಶಗಳು ಜಲಾವೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಬುಧವಾರ ಮಧ್ಯರಾತ್ರಿ ಆರಂಭವಾದ ಭಾರಿ ಮಳೆ ಗುರುವಾರ ಬೆಳಿಗ್ಗೆಯವರೆಗೂ ಸುರಿದಿದೆ. ಇದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳು ಜಲಾವೃತವಾಗಿವೆ. 

ಅಯನಗರ ಭಾಗದಲ್ಲಿ ಗರಿಷ್ಠ 99.2 ಮಿ.ಮೀ ಮಳೆಯಾಗಿದೆ. ಪಾಲಂ ಮತ್ತು ರಿಡ್ಜ್‌ ಪ್ರದೇಶದಲ್ಲಿ ಕ್ರಮವಾಗಿ 93.6 ಮಿ.ಮೀ ಮತ್ತು 84.6 ಮಿ.ಮೀ ಹಾಗೂ ಸಫ್ದರ್‌ಜಂಗ್‌‌ನಲ್ಲಿ 68 ಮಿ.ಮೀ ಮಳೆ ಸುರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರಸಕ್ತ ಮುಂಗಾರಿನಲ್ಲಿ ಇಲ್ಲಿಯವರೆಗೆ ದೆಹಲಿಯಲ್ಲಿ ಸುರಿದಿರುವ ಅತಿ ಹೆಚ್ಚು ಮಳೆ ಇದಾಗಿದೆ. 

ದೆಹಲಿಯಲ್ಲಿ ಮುಂದಿನ ಎರಡು, ಮೂರು ದಿನಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಐಎಂಡಿಯ ಪ್ರಾದೇಶಿಕ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು