ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಶನಿವಾರ ಬೆಳಿಗ್ಗೆ ತೀವ್ರ ಚಳಿ ಅನುಭವಕ್ಕೆ ಬಂದಿದ್ದು ಕನಿಷ್ಠ ತಾಪಮಾನ 8.5 ಡಿಗ್ರಿ ಸೆಲ್ಸಿಯಸ್ ಇತ್ತೆಂದು ವರದಿಯಾಗಿದೆ.
ದೆಹಲಿಯಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯ ಮಿತಿಗಿಂತ ನಾಲ್ಕು ಅಂಶ ಕಡಿಮೆ ಇದೆ ಎಂಬುದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದತ್ತಾಂಶದಿಂದ ತಿಳಿದುಬಂದಿದೆ. ಶುಕ್ರವಾರ ಕನಿಷ್ಠ ತಾಪಮಾನ 7.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು 14 ವರ್ಷಗಳಲ್ಲಿ ನವಂಬರ್ ತಿಂಗಳಲ್ಲಿ ದೆಹಲಿಯಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನ ಎಂದು ಹವಾಮಾನ ಇಲಾಖೆ ತಿಳಿಸಿತ್ತು.
ಸೋಮವಾರದಿಂದ ಕನಿಷ್ಠ ತಾಪಮಾನ ಸಾಮಾನ್ಯ ಹಂತಕ್ಕೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಹೇಳಿದ್ದಾರೆ.
ಸತತ ಎರಡು ದಿನಗಳ ಕಾಲ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇದ್ದು ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ತಿಳಿಸಿದೆ.
ದೆಹಲಿಯಲ್ಲಿ ಕಳೆದ ವರ್ಷ ಕನಿಷ್ಠ ತಾಪಮಾನ 11.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. 2018 ರಲ್ಲಿ 10.5 ಮತ್ತು 2017ರಲ್ಲಿ 7.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿತ್ತು.
1938 ನವೆಂಬರ್ ತಿಂಗಳಲ್ಲಿ ಅತಿ ಕನಿಷ್ಠ ತಾಪಮಾನ 3.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.