ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕನಿಷ್ಠ ತಾಪಮಾನ 6.9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತ

Last Updated 22 ನವೆಂಬರ್ 2020, 6:01 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ಭಾನುವಾರ ಕನಿಷ್ಠ ತಾಪಮಾನ 6.9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು, ನಗರದ ಹಲವೆಡೆ ಶೀತ ಅಲೆಗಳ ಪರಿಸ್ಥಿತಿ ಸೃಷ್ಟಿಯಾಗಿದೆ. ಇದು 2003ರ ಬಳಿಕ ನವೆಂಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನವಾಗಿದೆ.

ದೆಹಲಿಯಲ್ಲಿ ಕಳೆದ ಶುಕ್ರವಾರ 7.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿತ್ತು. ಅದು 14 ವರ್ಷಗಳಲ್ಲಿ ನವೆಂಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ಉಷ್ಣಾಂಶ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿತ್ತು.

ನಗರ ಸಫ್ದರ್ಜಂಗ್ ವೀಕ್ಷಣಾಲಯದ ಪ್ರಕಾರ ದೆಹಲಿಯಲ್ಲಿ ಭಾನುವಾರ ಕನಿಷ್ಠ ಉಷ್ಣಾಂಶ 6.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. 2003ರ ನವೆಂಬರ್‌ನಲ್ಲಿ 6.1 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿತ್ತು ಎಂದು ಐಎಂಡಿಯ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.

‘ಸಾಮಾನ್ಯವಾಗಿ ಸತತ ಎರಡು ದಿನ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇದ್ದಾಗ ಶೀತ ಅಲೆಯನ್ನು ಘೋಷಿಸಲಾಗುತ್ತದೆ’ ಎಂದು ಅವರು ತಿಳಿಸಿದರು.

ದೆಹಲಿಯಲ್ಲಿ ಕಳೆದ ವರ್ಷ ಕನಿಷ್ಠ ತಾಪಮಾನ 11.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. 2018 ರಲ್ಲಿ 10.5 ಮತ್ತು 2017ರಲ್ಲಿ 7.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿತ್ತು.

1938ರ ನವೆಂಬರ್‌ 28ರಂದು ದೆಹಲಿಯಲ್ಲಿ ಅತಿ ಕನಿಷ್ಠ ತಾಪಮಾನ 3.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT