ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ 7.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲು

14 ವರ್ಷಗಳಲ್ಲಿ ನವೆಂಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನ
Last Updated 20 ನವೆಂಬರ್ 2020, 8:19 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ಶುಕ್ರವಾರ ಕನಿಷ್ಠ ತಾಪಮಾನ 7.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇದು 14 ವರ್ಷಗಳಲ್ಲಿ ನವೆಂಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ನಗರದಲ್ಲಿ ಕನಿಷ್ಠ ತಾಪಮಾನ ದಾಖಲಾಗಿದ್ದರಿಂದ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ‘ಸ್ಕೈಮೆಟ್’ನ ಮಹೇಶ್ ಪಲಾವತ್ ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ಸಾಮಾನ್ಯವಾಗಿ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇದ್ದಾಗ ಶೀತ ಅಲೆಯನ್ನು ಘೋಷಿಸುತ್ತದೆ. ಆದರೆ ಇದೀಗ ಸತತ ಎರಡು ದಿನ ದೆಹಲಿಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಿದೆ ಎಂದು ಅವರು ಹೇಳಿದರು.

ಪಶ್ಚಿಮ ಹಿಮಾಲಯದಿಂದ ಶೀತ ಮಾರುತಗಳು ಬೀಸುತ್ತಿರುವುದರಿಂದಾಗಿ ದೆಹಲಿಯಲ್ಲಿ ತಾಪಮಾನ ಕುಸಿದಿದೆ. ಶನಿವಾರವೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಪಲಾವತ್‌ ಅವರು ತಿಳಿಸಿದರು.

ದೆಹಲಿಯಲ್ಲಿ ಕಳೆದ ವರ್ಷ ಕನಿಷ್ಠ ತಾಪಮಾನ 11.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. 2018 ರಲ್ಲಿ 10.5 ಮತ್ತು 2017ರಲ್ಲಿ 7.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿತ್ತು.

1938 ನವೆಂಬರ್‌ ತಿಂಗಳಲ್ಲಿ ಅತಿ ಕನಿಷ್ಠ ತಾಪಮಾನ 3.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT