ಭಾನುವಾರ, ಮಾರ್ಚ್ 7, 2021
32 °C

ದೆಹಲಿ: ಕನಿಷ್ಠ ತಾಪಮಾನ 5.7 ಡಿಗ್ರಿ ಸೆಲ್ಸಿಯಸ್‌ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯಲ್ಲಿ ಭಾನುವಾರ ಕನಿಷ್ಠ ತಾಪಮಾನ 5.7 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಆದರೆ ಮುಂದಿನ ಎರಡು ದಿನಗಳಲ್ಲಿ ಗಾಳಿಯ ದಿಕ್ಕಿನಲ್ಲಾಗುವ ಬದಲಾವಣೆಯಿಂದಾಗಿ ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.

ನಗರದಲ್ಲಿ ಶನಿವಾರ ಕನಿಷ್ಠ ಉಷ್ಣಾಂಶವು 6.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ಸಫ್ದರ್ಜಂಗ್ ವೀಕ್ಷಣಾಲಯದಲ್ಲಿ ಭಾನುವಾರ ಬೆಳಿಗ್ಗೆ ಕನಿಷ್ಠ ತಾಪಮಾನವು 5.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

‘ದೆಹಲಿಯಲ್ಲಿ ಪೂರ್ವದಿಂದ ಗಾಳಿ ಬೀಸುತ್ತಿದೆ. ಇದು ಪಶ್ಚಿಮ ಹಿಮಾಲಯದಿಂದ ಬೀಸುವ ವಾಯುವ್ಯ ಮಾರುತಗಳಷ್ಟು ತಂಪಾಗಿಲ್ಲ’ ಎಂದು ಐಎಂಡಿಯ ಅಧಿಕಾರಿಯೊಬ್ಬರು ತಿಳಿಸಿದರು.

‘ಮುಂದಿನ ಎರಡು ದಿನ ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ. ಸೋಮವಾರ ತಾಪಮಾನವು 8 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಬಹುದು’ ಎಂದು ಐಎಂಡಿ ಅಂದಾಜಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು