ಭಾನುವಾರ, ಮೇ 22, 2022
25 °C

ದೆಹಲಿ: 12 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, ಶೇ 21 ರಷ್ಟು ಪಾಸಿಟಿವಿಟಿ ದರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಗುರುವಾರ 12,306 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 43 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

24 ಗಂಟೆ ಅವಧಿಯಲ್ಲಿ 18,815 ಮಂದಿ ಗುಣಮುಖರಾಗಿದ್ದು, ಸದ್ಯ 68,730 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ 21.48 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 94.64 ರಷ್ಟಿದೆ.

ದೆಹಲಿಯಲ್ಲಿ ಇದುವರೆಗೆ 25,503 ಮಂದಿ ಸಾವಿಗೀಡಾಗಿದ್ದಾರೆ.

ಬುಧವಾರ 13,785 ಹೊಸ ಪ್ರಕರಣಗಳು ದಾಖಲಾಗಿದ್ದವು. ನಿನ್ನೆಗೆ ಹೋಲಿಸಿದರೆ ಇಂದಿನ ದೈನಂದಿನ ಪ್ರಕರಣಗಳಲ್ಲಿ ಶೇ 10.72 ರಷ್ಟು ಕಡಿಮೆ ಪ್ರಕರಣಗಳು ದಾಖಲಾಗಿವೆ.

53,593 ಮಂದಿ ಹೋಂ ಐಸೋಲೇಶನ್‌ನಲ್ಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು